Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳನ್ನು ರಾಜಕೀಯ ಉದ್ದೇಶಕ್ಕೆ ರೂಪಿಸಿ ಜಾರಿಮಾಡಿಲ್ಲ: ಜಿ ಪರಮೇಶ್ವರ್, ಗೃಹ ಸಚಿವ

ಗ್ಯಾರಂಟಿ ಯೋಜನೆಗಳನ್ನು ರಾಜಕೀಯ ಉದ್ದೇಶಕ್ಕೆ ರೂಪಿಸಿ ಜಾರಿಮಾಡಿಲ್ಲ: ಜಿ ಪರಮೇಶ್ವರ್, ಗೃಹ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 08, 2024 | 7:32 PM

ರಾಜ್ಯದ ಲಕ್ಷಾಂತರ ಬಡವರು, ಕೂಲಿ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದ ಜನರನ್ನು ಬಡತನ ರೇಖೆಯಿಂದ ಮೇಲೆತ್ತಲು ಯೋಜನೆಗಳನ್ನು ರಚಿಸಿ ಜಾರಿಗೊಳಿಸಲಾಗಿದೆ. ಬಹಳ ವರ್ಷಗಳ ಹಿಂದೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ಗರೀಬೀ ಹಟಾವೋ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದರು. ಅದನ್ನೇ ಪ್ರೇರಣೆ ಮತ್ತು ಆಧಾರವಾಗಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ವಿನ್ಯಾಸಗೊಳಿಸಿ ಜಾರಿಗೊಳಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲ ನಾಯಕರೇ ಹೇಳುತ್ತಿರುವ ಹಾಗೆ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು (Guarantee schemes) ನಿಂತು ಹೋಗಲಿವೆಯೇ? ಯಾವ ಕಾರಣಕ್ಕೂ ನಿಲ್ಲಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿಂದು ಟಿವಿ ವರದಿಗಾರನೊಂದಿಗೆ ನಡೆಸಿದ ಎಕ್ಸ್ ಕ್ಲ್ಯೂಸಿವ್ ಮಾತುಕತೆಯಲ್ಲಿ ಪರಮೇಶ್ವರ್ ಗ್ಯಾರಂಟಿ ಯೋಜನೆಗಳಿಂದ ತಮ್ಮ ಪಕ್ಷಕ್ಕೆ ಲಾಭವಾಗಿರಬಹುದು, ಅದರೆ, ಅವುಗಳನ್ನು ರಾಜಕೀಯ ದೃಷ್ಟಿಕೋನದಿಂದ (political point of view) ಜಾರಿಗೊಳಿಸಿಲ್ಲ, ರಾಜ್ಯದ ಲಕ್ಷಾಂತರ ಬಡವರು, ಕೂಲಿ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದ ಜನರನ್ನು ಬಡತನ ರೇಖೆಯಿಂದ ಮೇಲೆತ್ತಲು ಯೋಜನೆಗಳನ್ನು ರಚಿಸಿ ಜಾರಿಗೊಳಿಸಲಾಗಿದೆ. ಬಹಳ ವರ್ಷಗಳ ಹಿಂದೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ಗರೀಬೀ ಹಟಾವೋ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದರು. ಅದನ್ನೇ ಪ್ರೇರಣೆ ಮತ್ತು ಆಧಾರವಾಗಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ವಿನ್ಯಾಸಗೊಳಿಸಿ ಜಾರಿಗೊಳಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್ ಸೋತರೆ ಯೋಜನೆಗಳು ನಿಲ್ಲಲಿವೆ ಅಂತ ಅಪಪ್ರಚಾರ ಮಾಡಿದ್ದಾರೆ. ಅದರೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ತಾನು ಚುನಾವಣೆಯ ಫಲಿತಾಂಶ ಏನೇ ಆದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗಲ್ಲ ಅಂತ ಹೇಳಿದ್ದೆವು, ಅವು ನಿಲ್ಲಲ್ಲ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ಹೇಳಿದ್ದು ಗಣನೆಗೆ ಬರಲ್ಲ, ಸಿಎಂ ಮತ್ತು ನಾನು ಹೇಳೋದು ಮಾತ್ರ ಅಧಿಕೃತ: ಜಿ ಪರಮೇಶ್ವರ್, ಗೃಹ ಸಚಿವ