ಅವಸರದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಹೆಚ್ ಡಿ ಕುಮಾರಸ್ವಾಮಿ, ಸೂರಜ್ ರೇವಣ್ಣ ಬಗ್ಗೆ ಕೇಳಿದಾಗ ಸಿಡುಕಿದರು!

|

Updated on: Jun 22, 2024 | 1:29 PM

ಇಂಥ ಸಮಸ್ಯೆಗಳನ್ನು ನೋಡಿಕೊಳ್ಳಲು ಪೊಲೀಸ್ ವ್ಯವಸ್ಥೆ ಮತ್ತು ಕಾನೂನುಗಳಿವೆ ಎಂದು ಹೇಳಿದ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭಾ ಉಪ-ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಆದರೂ ಸ್ಪರ್ಧಿಸಲಿ ಇಲ್ಲವೇ ತಮ್ಮೊಂದಿಗೆ ಇನ್ನೂ ನಾಲ್ವರನ್ನು ಸೇರಿಸಿಕೊಂಡು ಕಣಕ್ಕಿಳಿಯಲಿ, ಅದು ತಮ್ಮ ಪಕ್ಷಕ್ಕೆ ಸಂಬಂಧಪಡದ ವಿಷಯ ಎಂದರು.

ದೇವನಹಳ್ಳಿ: ದೆಹಲಿಯಿಂದ ತರಾತುರಿಯಲ್ಲಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA, Devanahalli) ಮಾಧ್ಯಮ ಪ್ರತಿನಿಧಿಳೊಂದಿಗೆ ಮಾತಾಡವಾಗ ಎಲ್ಲ ಪ್ರಶ್ನೆಗಳಿಗೆ ಶಾಂತಚಿತ್ತರಾಗಿ ಉತ್ತರ ನೀಡಿದರಾದರೂ ಪಕ್ಷದ ಕಾರ್ಯಕರ್ತನೊಬ್ಬನ ಮೇಲೆ ಅಸಹಜ ಲೈಂಗಿಕ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ (Dr Suraj Revanna) ಬಗ್ಗೆ ಪ್ರಶ್ನೆ ಕೇಳಿದಾಗ ಸಿಡುಕಿದರು. ಇಂಥ ಪ್ರಶ್ನೆಗಳನ್ನೆಲ್ಲ ಕೇಳಬಾರದು, ರಾಜ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳೇನಾದರೂ ಇದ್ದರೆ ಕೇಳಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಇಂಥ ಸಮಸ್ಯೆಗಳನ್ನು ನೋಡಿಕೊಳ್ಳಲು ಪೊಲೀಸ್ ವ್ಯವಸ್ಥೆ ಮತ್ತು ಕಾನೂನುಗಳಿವೆ ಎಂದು ಹೇಳಿದ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭಾ ಉಪ-ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಆದರೂ ಸ್ಪರ್ಧಿಸಲಿ ಇಲ್ಲವೇ ತಮ್ಮೊಂದಿಗೆ ಇನ್ನೂ ನಾಲ್ವರನ್ನು ಸೇರಿಸಿಕೊಂಡು ಕಣಕ್ಕಿಳಿಯಲಿ, ಅದು ತಮ್ಮ ಪಕ್ಷಕ್ಕೆ ಸಂಬಂಧಪಡದ ವಿಷಯ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಧಾನಿ ಮೋದಿಯವರ ಸಾಧನೆ ಕುಮಾರಸ್ವಾಮಿ ಕೊಂಡಾಡಿದಾಗ ಎನ್ ಡಿಎ ಸದಸ್ಯರೆಲ್ಲ ಮೇಜುತಟ್ಟಿ ಹರ್ಷಿಸಿದರು!

Follow us on