ಮಂಡ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಕುಮಾರಸ್ವಾಮಿಯವರನ್ನು ಅಭಿನಂದಿಸಿದ ಸಂಸದ ತೇಜಸ್ವೀ ಸೂರ್ಯ

ತೇಜಸ್ವೀ ಭೇಟಿ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಮಗ ಮತ್ತು ಯುವ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ತಂದೆಯ ಮನೆಯಲ್ಲಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿನ್ನೆ ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಸಾಯಂಕಾಲ ನಗರಕ್ಕೆ ವಾಪಸ್ಸಾದರು.

ಮಂಡ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಕುಮಾರಸ್ವಾಮಿಯವರನ್ನು ಅಭಿನಂದಿಸಿದ ಸಂಸದ ತೇಜಸ್ವೀ ಸೂರ್ಯ
|

Updated on: Jun 06, 2024 | 11:02 AM

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರನ್ನು (HD Kumaraswamy) ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭಾ ಸದಸ್ಯರಾಗಿ ಚುನಾಯಿತರಾಗಿರುವ ಸಂಸದ ತೇಜಸ್ವೀ ಸೂರ್ಯ (Tejasvi Surya) ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿಯ ಜೆಪಿ ನಗರದಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ (Lok Sabha polls) ಗಳಿಸಿದ ಯಶಸ್ಸಿನ ಹಿನ್ನೆಲೆ ಗೌರವಿಸಿ ಅಭಿನಂದಿಸಿದರು. ಸೂರ್ಯ, ಕುಮಾರಸ್ವಾಮಿಯವರಿಗೆ ಶಾಲು ಹೊದಿಸಿ ಹೂಮಾಲೆ ತೊಡಿಸಿದ ಬಳಿಕ ಹಿರಿಯ ನಾಯಕನ ಪಾದಸ್ಪರ್ಶ ಮಾಡಿ ಆಶೀರ್ವಾದ ಪಡೆದರು. ಮಾಜಿ ಮುಖ್ಯಮಂತ್ರಿಯ ಕೈಗೆ ಅವರು ಸ್ವೀಟ್ ಬಾಕ್ಸೊಂದನ್ನು ಸಹ ನೀಡಿದರು. ತೇಜಸ್ವೀ ಭೇಟಿ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಮಗ ಮತ್ತು ಯುವ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಂದೆಯ ಮನೆಯಲ್ಲಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿನ್ನೆ ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಸಾಯಂಕಾಲ ನಗರಕ್ಕೆ ವಾಪಸ್ಸಾದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯುವ ಬಿಜೆಪಿ ನಾಯಕ ತೇಜಸ್ವೀ ಸೂರ್ಯ

Follow us