ಸಭೆಯಲ್ಲಿ ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆ ನಡೆಯಲಿಲ್ಲ, ನಾನು ಯಾವುದೇ ಬೇಡಿಕೆ ಇಟ್ಟಿಲ್ಲ: ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 05, 2024 | 7:49 PM

ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು, ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆಯಾಗಲಿಲ್ಲ ಮತ್ತು ತಾನು ಯಾವುದೇ ಬೇಡಿಕೆ ಇಟ್ಟಿಲ್ಲ, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಮಾತ್ರ ಎನ್ನುತ್ತಾ ಕುಮಾರಸ್ವಾಮಿ ಹೊರಟುಬಿಟ್ಟರು.

ದೆಹಲಿ: ರಾಜ್ಯ ಜೆಡಿಎಸ್ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ಬೆಳಗ್ಗೆ ಬೆಂಗಳೂರಿಂದ ದೆಹಲಿಗೆ ಹೊರಡುವಾಗ ತರಾತುರಿಯಲ್ಲಿದ್ದರು ಮತ್ತು ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನೇತೃತ್ವದಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ (NDA Meeting) ಭಾಗಿಯಾಗಿ ಹೊರಬಂದಾಗಲೂ ಅದೇ ಧಾವಂತದಲ್ಲಿದ್ದರು. ತಮ್ಮನ್ನು ಹೊತ್ತ ಕಾರು ಚಲಿಸುತ್ತಿರುವಂತೆಯೇ ನಮ್ಮ ದೆಹಲಿ ವರದಿಗಾರನೊಂದಿಗೆ ಮಾತಾಡಿದ ಅವರು, ಇದು ಪರಸ್ಪರ ಅಭಿನಂದಿಸುವ, ಶುಭಾಷಯ ವಿನಿಮಯ ಮಾಡಿಕೊಳ್ಳುವ ಸಭೆಯಾಗಿತ್ತು, ಅದಕ್ಕೆ ಮಿಗಿಲಾಗಿ ಬೇರೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು. ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು, ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆಯಾಗಲಿಲ್ಲ ಮತ್ತು ತಾನು ಯಾವುದೇ ಬೇಡಿಕೆ ಇಟ್ಟಿಲ್ಲ, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಮಾತ್ರ ಎನ್ನುತ್ತಾ ಕುಮಾರಸ್ವಾಮಿ ಹೊರಟುಬಿಟ್ಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಧಾವಂತದಲ್ಲಿ ದೆಹಲಿಗೆ ಹೊರಟ ಕುಮಾರಸ್ವಾಮಿ ಎನ್ ಡಿಎ ಮೈತ್ರಿಕೂಟವೇ ಸರ್ಕಾರ ರಚಿಸೋದು ಎಂದರು!

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.