ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ವಿರೋಧಪಕ್ಷಗಳು ಒಂದು ದಶಕದಿಂದ ಭ್ರಷ್ಟಾಚಾರ ಹುಡುಕುವ ಪ್ರಯತ್ನ ಮಾಡುತ್ತಿವೆ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 22, 2024 | 2:21 PM

ತೈಲಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ದರಗಳ ಮೇಲೆ ನಿರ್ಭರಗೊಂಡಿರುತ್ತದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ಬ್ಯಾರೆಲ್ ತೈಲದ ಬೆಲೆ ಕಡಿಮೆ ಆದಾಗ ಭಾರತದಲ್ಲೂ ಕಡಿಮೆಯಾಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪವೇನೂ ಇರದು ಎಂದು ಯತ್ನಾಳ್ ಹೇಳಿದರು.

ವಿಜಯಪುರ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸ್ಥಳೀಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ನರೇಂದ್ರ ಮೋದಿ (PM Narendra Modi) ನೇತೃತ್ವದ ಸರ್ಕಾರ ಭ್ರಷ್ಟಾಚಾರ-ರಹಿತ ಆಡಳಿತ ನಡೆಸಿದೆ, ವಿರೋಧ ಪಕ್ಷಗಳು ಭ್ರಷ್ಟಾಚಾರ (corruption) ಹುಡುಕುವ ಭಗೀರಥ ಪ್ರಯತ್ನಗಳನ್ನು ನಡೆಸಿವೆ, ಆದರೆ ಅವುಗಳಿಗೆ ಸಾಧ್ಯವಾಗಿಲ್ಲ ಎಂದು ಹೇಳಿದರು. ಕಳೆದೊಂದು ದಶಕದ ಅವಧಿಯಲ್ಲಿ ದೇಶದೆಲ್ಲೆಡೆ ರಸ್ತೆ ಕಾಮಗಾರಿ ನಡೆದಿದೆ, ಅನೇಕ ಕಡೆ ಹೆದ್ದಾರಿಗಳ ನಿರ್ಮಾಣವಾಗಿದೆ, ಸಿಎನ್ ಜಿಯನ್ನು ಹೆಚ್ಚಿನ ಮಟ್ಟಿಗೆ ಬಳಸಲಾಗುತ್ತಿದೆ ಮತ್ತು ಮುಬರುವ ದಿನಗಳಲ್ಲಿ ಪ್ರತಿ ಮನೆಗೆ ಸೋಲಾರ್ ಪವರ್ ಒದಗಿಸುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಯತ್ನಾಳ್ ಹೇಳಿದರು. ತೈಲಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ದರಗಳ ಮೇಲೆ ನಿರ್ಭರಗೊಂಡಿರುತ್ತದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ಬ್ಯಾರೆಲ್ ತೈಲದ ಬೆಲೆ ಕಡಿಮೆ ಆದಾಗ ಭಾರತದಲ್ಲೂ ಕಡಿಮೆಯಾಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪವೇನೂ ಇರದು ಎಂದು ಯತ್ನಾಳ್ ಹೇಳಿದರು. ಆದರೆ, ಸೂರಜ್ ರೇವಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಯತ್ನಾಳ್ ಪಲಾಯನವಾದದ ಮೊರೆಹೊಕ್ಕರು. ಆದರ ಬಗ್ಗೆ ತಾನೇನೂ ಹೇಳಲ್ಲ, ತನಿಖೆ ನಡೆಯುತ್ತದೆ, ಸತ್ಯ ಹೊರಬರುತ್ತದೆ ಎಂದಷ್ಟೇ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಡಿ ಫ್ಯಾಕ್ಟರಿ ನಡೆಸುತ್ತಿರುವ ಎರಡು ಕುಟುಂಬಗಳು ರಾಜ್ಯ ರಾಜಕಾರಣವನ್ನು ಹೊಲಸೆಬ್ಬಿಸಿವೆ: ಬಸನಗೌಡ ಪಾಟೀಲ್ ಯತ್ನಾಳ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.