ಶರಣಪ್ರಕಾಶ್ ಪಾಟೀಲ ಹೆಸರು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಉಲ್ಲೇಖವಾದಾಕ್ಷಣ ಅರೋಪಿಯಲ್ಲ: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 08, 2024 | 12:00 PM

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಶು ದುರ್ವ್ಯವಹಾರದದಲ್ಲಿ ಇತ್ತೀಚಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಹೆಸರು ಕೇಳಿ ಬರುತ್ತಿರುವ ಅಂಶವನ್ನು ಸಚಿವ ಪರಮೇಶ್ವರ್ ಗಮನಕ್ಕೆ ತಂದಾಗ, ತನಿಖೆ ನಡೆಯುವಾಗ ಕ್ರಾಸ್ ರೆಫರೆನ್ಸ್ ಗಳು ಬರುತ್ತಿರುತ್ತವೆ, ಹಾಗೆಂದ ಮಾತ್ರಕ್ಕೆ ಅಥವಾ ಬಿಜೆಪಿ ನಾಯಕರು ಹೇಳಿದ್ದಾರೆ ಅಂತ ಶರಣಪ್ರಕಾಶ್ ಪಾಟೀಲ್ ದೋಷಿಯಾಗಲ್ಲ ಎಂದರು,

ಬೆಂಗಳೂರು: ನಗರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara ) ಅವರು ಲೋಕಸಭಾ ಚುನಾವಣೆಯಲ್ಲಿ (Lok Sabha Polls) ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಹಿನ್ನಡೆಯಾಗಿರುವುದಕ್ಕೆ ಆತ್ಮಾವಲೋಕನ ಮಾಡಿಕೊಳ್ಳಲಾಗುತ್ತಿದೆ. ಹೈಕಮಾಂಡ್ (high command ) ರಾಜ್ಯದ ನಾಯಕರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದೆ, ಅವುಗಳನ್ನು ಅನುಸರಿಲಾಗವುದು ಎಂದು ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಶು ದುರ್ವ್ಯವಹಾರದದಲ್ಲಿ ಇತ್ತೀಚಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಹೆಸರು ಕೇಳಿ ಬರುತ್ತಿರುವ ಅಂಶವನ್ನು ಸಚಿವ ಪರಮೇಶ್ವರ್ ಗಮನಕ್ಕೆ ತಂದಾಗ, ತನಿಖೆ ನಡೆಯುವಾಗ ಕ್ರಾಸ್ ರೆಫರೆನ್ಸ್ ಗಳು ಬರುತ್ತಿರುತ್ತವೆ, ಹಾಗೆಂದ ಮಾತ್ರಕ್ಕೆ ಅಥವಾ ಬಿಜೆಪಿ ನಾಯಕರು ಹೇಳಿದ್ದಾರೆ ಅಂತ ಶರಣಪ್ರಕಾಶ್ ಪಾಟೀಲ್ ದೋಷಿಯಾಗಲ್ಲ. ಎಸ್ಐಟಿ ತನಿಖೆ ನಡೆಸುತ್ತಿದೆ. ಎಲ್ಲಾ ಅಂಶಗಣನ್ನು ಅವರು ಪರಾಮರ್ಶೆ ಮಾಡುತ್ತಾರೆ. ಎಸ್ಐಟಿ ತನಿಖೆ ಜಾರಿಯಲ್ಲಿರುವಾಗ ಕಾಮೆಂಟ್ ಮಾಡೋದು ಸರಿಯಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಪಿಸಿಸಿ ಅಧ್ಯಕ್ಷನ ಬದಲಾವಣೆಯೂ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಜಿ ಪರಮೇಶ್ವರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.