ಬಿಬಿಎಂಪಿ ಅಧಿಕಾರಿಯನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕೆಅರ್ ಎಸ್ ಪಕ್ಷದ ಇಬ್ಬರು ಕಾರ್ಯಕರ್ತರ ಬಂಧನ
ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿರುವ ಪ್ಲಾಸ್ಟಿಕ್ ಚೀಲಗಳನ್ನು ನಿಷೇಧಿಸುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿ ಅರ್ಪಿತಾ ಎನ್ನುವವರು ಬಗಲುಗುಂಟೆಯ ರಸ್ತೆ ಬದಿಯ ಚಿಕ್ಕಪುಟ್ಟ ಅಂಗಡಿಗಳ ತಪಾಸಣೆ ನಡೆಸುತ್ತಿದ್ದಾಗ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಅವರೊಂದಿಗೆ ವಾಗ್ವಾದಕ್ಕಿಳಿದು ನಿಂದಿಸಿದ್ದಾರೆ.
ನೆಲಮಂಗಲ: ಯಾವುದೋ ಪಕ್ಷದ ಹೆಸರು ಹೇಳಿಕೊಂಡು ಸರ್ಕಾರೀ ಅಧಿಕಾರಿಗಳನ್ನು ಬೆದರಿಸುವುದು, ಸುಲಿಗೆ (extortion) ಮಾಡುವುದು ಹೊಸದೇನಲ್ಲ. ರಾಜ್ಯದೆಲ್ಲೆಡೆ ಇದು ಸದಾ ನಡೆಯುತ್ತಿರುತ್ತದೆ. ಬೆಂಗಳೂರಿನ ಬಗಲುಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಅರ್ ಎಸ್ ಪಕ್ಷದ (KRS party) ಇಬ್ಬರು ಕಾರ್ಯಕರ್ತರು ಕರ್ತವ್ಯನಿರತ ಬಿಬಿಎಂಪಿ ಅಧಿಕಾರಿಯೊಬ್ಬರನ್ನು ನಿಂದಿಸಿ ಅವರ ಕೆಲಸಕ್ಕೆ ಅಡ್ಡಿಪಡಿಸಿದ ಕಾರಣ ಬಂಧನಕ್ಕೊಳಗಾಗಿದ್ದಾರೆ. ಬಂಧಿತರನ್ನು ಮುದ್ದುರಾಜ ಮತ್ತು ನಾಗರಾಜ ಎಂದು ಗುರುತಿಸಲಾಗಿದ್ದು ಅವರನ್ನು ನ್ಯಾಯಾಂಗ ಕಸ್ಟಡಿಗೆ ನೀಡಲಾಗಿದೆ. ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿರುವ ಪ್ಲಾಸ್ಟಿಕ್ ಚೀಲಗಳನ್ನು ನಿಷೇಧಿಸುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿ ಅರ್ಪಿತಾ (Arpita) ಎನ್ನುವವರು ಬಗಲುಗುಂಟೆಯ ರಸ್ತೆ ಬದಿಯ ಚಿಕ್ಕಪುಟ್ಟ ಅಂಗಡಿಗಳ ತಪಾಸಣೆ ನಡೆಸುತ್ತಿದ್ದಾಗ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಅವರೊಂದಿಗೆ ವಾಗ್ವಾದಕ್ಕಿಳಿದು ನಿಂದಿಸಿದ್ದಾರೆ. ದೃಶ್ಯಗಳನ್ನು ವಿಡಿಯೋದಲ್ಲಿ ಗಮನಿಸಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: BBMP ವಿಭಜನೆ ಮಾಡಿ ಗ್ರೇಟರ್ ಬೆಂಗಳೂರು ನಿರ್ಮಾಣಕ್ಕೆ ಮುಂದಾದ ಸರ್ಕಾರ; ಬೆಂಗಳೂರಿನ ಸುತ್ತಲಿನ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ