ಕರ್ನಾಟಕದಲ್ಲಿ ಕಾಂಗ್ರೆಸ್ 15-20 ಸ್ಥಾನಗಳನ್ನು ಗೆಲ್ಲಲಿದೆ, ಸಮೀಕ್ಷೆಗಳಲ್ಲಿ ನಂಬಿಕೆಯಿಲ್ಲ: ಸಿದ್ದರಾಮಯ್ಯ
ಎಕ್ಸಿಟ್ ಪೋಲ್ ಗಳ ಬಗ್ಗೆ ಮಾತಾಡಿದ ಮುಖ್ಯಮಂತ್ರಿಯವರು, ಅವುಗಳ ಮೇಲೆ ನಂಬಿಕೆ ಇಲ್ಲ, ಅವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾಧ್ಯಮಗಳು ಮಾಡಿರುವ ಸಮೀಕ್ಷೆಗಳು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕನಿಷ್ಠ 15ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ರಾಜ್ಯದಲ್ಲಿ ಮಳೆಯಾಗುತ್ತಿರುವುದು ಮತ್ತು ಸರ್ಕಾರ ಸಿದ್ಧತೆಯ (preparedness) ಬಗ್ಗೆ ಮಾತಾಡಿದರು. ಮುಂಗಾರು ಮಳೆ ಆರಂಭವಾಗಿದೆ ಮತ್ತು ನಿನ್ನೆ ರಾತ್ರಿ ಬೆಂಗಳೂರಲ್ಲಿ ಒಳ್ಳೆಯ ಮಳೆಯಾಗಿದೆ. ಸರ್ಕಾರ ಎಲ್ಲ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡಿದೆ ಆದರೂ ಹೆಚ್ಚು ಮಳೆಯಾದಾಗ ಸಮಸ್ಯೆಗಳು ತಲೆದೋರುತ್ತವೆ. ನಗರದ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿವೆ ಅವುಗಳನ್ನು ಮುಚ್ಚಿಸುವ ಕೆಲಸ ತಿಂಗಳೊಳಗೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಎಕ್ಸಿಟ್ ಪೋಲ್ ಗಳ ಬಗ್ಗೆ ಮಾತಾಡಿದ ಮುಖ್ಯಮಂತ್ರಿಯವರು, ಅವುಗಳ ಮೇಲೆ ನಂಬಿಕೆ ಇಲ್ಲ, ಅವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾಧ್ಯಮಗಳು ಮಾಡಿರುವ ಸಮೀಕ್ಷೆಗಳು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕನಿಷ್ಠ 15ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕು: ಬಸನಗೌಡ ಯತ್ನಾಳ್