ನಟ ಕಮಲ್ ಹಾಸನ್ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿದ್ದರಾಮಯ್ಯ
ತಮ್ಮ "ಥಗ್ ಲೈಫ್" ಚಿತ್ರದ ಪ್ರಚಾರದ ವೇಳೆ, ಕಮಲ್ ಹಾಸನ್ ಅವರು ಕನ್ನಡದ ಮೂಲ ತಮಿಳು ಎಂದು ಹೇಳಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಪರ ಸಂಘಟನೆಗಳು ಮತ್ತು ನಟರ ಖಂಡನೆಗೆ ಒಳಗಾದ ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ಕಮಲ್ ಹಾಸನ್ ಅವರ ಹೇಳಿಕೆಯನ್ನು ಅವರು ಟೀಕಿಸಿದ್ದಾರೆ ಮತ್ತು ಕನ್ನಡದ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಅವರಿಗೆ ಸರಿಯಾದ ತಿಳುವಳಿಕೆ ಇಲ್ಲ ಎಂದು ಹೇಳಿದ್ದಾರೆ.
ಬಹುಭಾಷಾ ನಟ ಕಮಲ್ ಹಾಸನ್ (Kamal Haasan) ಅವರು ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಪ್ರಚಾರ ಮಾಡುವ ವೇಳೆ ಉದ್ದಟತನದ ಹೇಳಿಕೆ ನೀಡಿದ್ದಾರೆ. ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬರ್ಥದಲ್ಲಿ ಅವರು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಕಮಲ್ ಹಾಸನ್ ಅವರ ಹೇಳಿಕೆಯನ್ನು ಕನ್ನಡ ಪರ ಸಂಘಟನೆಗಳು ಖಂಡಿಸಿವೆ. ನಟ ಕಮಲ್ ಹಾನಸ್ ಆಕ್ರೋಶ ವ್ಯಕ್ತಪಡಿಸಿವೆ. ಇದೀಗ, ನಟ ಕಮಲ್ ಹಾಸನ್ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
Latest Videos

