ಕರ್ನಾಟಕ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ರಾಜ್ಯೋತ್ಸವ: ಕರ್ನಾಟಕದ ಧ್ವಜ ಹಾರಿಸುವ ಮೊದಲು ಸಿದ್ದರಾಮಯ್ಯ ರಾಷ್ಟ್ರಧ್ವಜವನ್ನು ಆರೋಹಣ ಮಾಡಿ ಗೌರವವಂದನೆಯನ್ನು ಸಲ್ಲಿಸಿದರು. ಬಳಿಕ ಮುಖ್ಯಮಂತ್ರಿಯವರು ಪೊಲೀಸ್ ಪಡೆಯಿಂದ ಗೌರವರಕ್ಷೆಯನ್ನು ಸ್ವೀಕರಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚನನ ನಡೆಯಿತು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 69ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡಾಂಬೆಯ ಧ್ವಜಾರೋಹಣ ಮಾಡಿದರು. ಮುಖ್ಯಮಂತ್ರಿಯವರ ಜೊತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೊದಲಾದವರಿದ್ದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಂಚ ತಡವಾಗಿ ಆಗಮಿಸಿದರು. ಸಿಎಂ ಅವರಿಗಾಗಿ ಕಾಯದೆ ಧ್ವಜಾರೋಹಣ ನೆರವೇರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಕ್ಫ್ ಭೂವಿವಾದ; ಬಿಜೆಪಿ ಅಧಿಕಾರದಲ್ಲಿದ್ದಾಗಲೂ ರೈತರಿಗೆ ನೋಟೀಸ್ ಜಾರಿಯಾಗಿದ್ದವು: ಸಿದ್ದರಾಮಯ್ಯ
Published on: Nov 01, 2024 11:04 AM