ಕಿರುತೆರೆ ನಟಿ ಚೇತನಾ ರಾಜ್ (Chetana Raj) ಅವರ ಸಾವಿನಿಂದ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ. ಕಣ್ಣತುಂಬ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ಮನೆಮಗಳು ಸಾವಿನ ಊರಿಗೆ ಪಯಣ ಬೆಳೆಸಿದ್ದಾಳೆ. ಕೇವಲ 22ನೇ ವಯಸ್ಸಿಗೆ ಪುತ್ರಿಯನ್ನು ಕಳೆದುಕೊಂಡಿರುವ ಪೋಷಕರಿಗೆ ದಿಕ್ಕೇ ತೋಚದಂತಾಗಿದೆ. ತಂದೆ-ತಾಯಿ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಫ್ಯಾಟ್ ಸರ್ಜರಿ (Fat Surgery) ಮಾಡಿಸಿಕೊಳ್ಳಲು ಬೆಂಗಳೂರಿನ ಶೆಟ್ಟಿ’ಸ್ ಆಸ್ಪತ್ರೆಗೆ ದಾಖಲಾಗಿದ್ದ ಚೇತನಾ ರಾಜ್ ಮೃತಪಟ್ಟಿದ್ದಾರೆ. ಸರ್ಜರಿ ವೈಫಲ್ಯದಿಂದ ಅವರು ಬಾರದ ಲೋಕಕ್ಕೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಅವರ ತಾಯಿ ಮುನಿಲಕ್ಷ್ಮೀ ಅವರು ಕಣ್ಣೀರು ಹಾಕಿದ್ದಾರೆ. ಮಗಳನ್ನು ನೆನೆದು ಬಿಕ್ಕಳಿಸಿ ಅತ್ತಿದ್ದಾರೆ. ಚೇತನಾ ರಾಜ್ ಸಾವಿನ (Chetana Raj Death) ಕುರಿತು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭ ಆಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.