ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ? ರಿಜಿಸ್ಟರ್ ಗೆ ಹೇಳಿದ ಸುಳ್ಳು ಏನು?
ಯೂಟ್ಯೂಬರ್ ಮುಕಳಪ್ಪ ವಿವಾಹ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಣ ಪಡೆದು ನಿಯಮ ಬಾಹಿರವಾಗಿ ಕ್ವಾಜಾ ಅಲಿಯಾಸ್ ಮುಕಳಪ್ಪ ಹಾಗೂ ಗಾಯತ್ರಿ ವಿವಾಹ ನೊಂದಣಿ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಮುಂಡಗೋಡ ಸಬ್ ರಿಜಿಸ್ಟರ್ ಕಚೇರಿಗೆ ಮುತ್ತಿಗೆ ಹಾಕಲಾಗಿದ್ದು, ಹಿಂದೂಪರ ಸಂಘಟನೆ ಹಾಗೂ ಯುವತಿಯ ತಾಯಿ ಶಿವಕ್ಕ ಸಬ್ ರಿಜಿಸ್ಟರ್ ಗೆ ತರಾಟೆ ತೆಗೆದುಕೊಂಡಿದ್ದಾರೆ.
ಕಾರವಾರ, (ಸೆಪ್ಟೆಂಬರ್ 22): ಯೂಟ್ಯೂಬರ್ ಮುಕಳಪ್ಪ ವಿವಾಹ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಣ ಪಡೆದು ನಿಯಮ ಬಾಹಿರವಾಗಿ ಕ್ವಾಜಾ ಅಲಿಯಾಸ್ ಮುಕಳಪ್ಪ ಹಾಗೂ ಗಾಯತ್ರಿ ವಿವಾಹ ನೊಂದಣಿ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಮುಂಡಗೋಡ ಸಬ್ ರಿಜಿಸ್ಟರ್ ಕಚೇರಿಗೆ ಮುತ್ತಿಗೆ ಹಾಕಲಾಗಿದ್ದು, ಹಿಂದೂಪರ ಸಂಘಟನೆ ಹಾಗೂ ಯುವತಿಯ ತಾಯಿ ಶಿವಕ್ಕ ಸಬ್ ರಿಜಿಸ್ಟರ್ ಗೆ ತರಾಟೆ ತೆಗೆದುಕೊಂಡಿದ್ದಾರೆ. ಸಬ್ ರಿಜಿಸ್ಟರ್ ನಿಯಮ ಮೀರಿ ಹುಬ್ಬಳ್ಳಿ-ಧಾರವಾಡ ನಿವಾಸಿಗಳನ್ನ ಮುಂಡಗೋಡು ನಿವಾಸಿಗಳೆಂದು ಸುಳ್ಳು ದಾಖಲೆ ನೀಡಿದ್ದಾರೆ. ಜೂನ್ 5 ರಂದು ದಾಖಲೆ ನೀಡಿ ಜೂನ್ 5 ರಂದೇ ವಿವಾಹ ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ. ನಿಯಮದಂತೆ ವಿವಾಹವಾಗುವವರು ಒಬ್ಬರಾದರೂ ಸ್ಥಳೀಯರಾಗಿರಬೇಕು ಎಂಬ ನಿಯಮವನ್ನು ಸಬ್ ರಿಜಿಸ್ಟರ್ ಗಾಳಿಗೆ ತೂರಿದ್ದಾರೆ. ಕರಾರು ಪತ್ರ ಪಡೆದಿರುವ ದಿನವೇ ವಿವಾಹ ನೋಂದಣಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

