ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ ಬಳಿದ ಕನ್ನಡಿಗರು
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆ ವಿರುದ್ಧ ಉದ್ಯಮಿಗಳಾದ ಕಿರಣ್ ಮಜುಂದಾರ್ ಹಾಗೂ ಮೋಹನ್ ದಾಸ್ ಪೈ ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆ ಇದೀಗ ಕನ್ನಡಿಗರು ಸಿಡಿದೆದ್ದಿದ್ದು ಬೆಂಗಳೂರಿನಲ್ಲಿರುವ ಕಿರಣ್ ಮಜುಂದಾರ್ ಸಂಸ್ಥೆಯ ಹೆಸರಿಗೆ ಮಸಿ ಬಳಿದಿದ್ದಾರೆ.
ಬೆಂಗಳೂರು, (ಜುಲೈ 21): ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನ ಶುರುವಾಗಿವೆ. ಫೋನ್ ಪೇ ವಿರುದ್ಧದ ಕನ್ನಡಿಗರು ನಡೆಸುತ್ತಿರುವ ಅಭಿಯಾನಕ್ಕೆ ನಟ ಸುದೀಪ್ ಬೆಂಬಲವಾಗಿ ನಿಂತಿದ್ದಾರೆ. ಫೋನ್ ಪೇ ಜತೆಗಿನ ಅಗ್ರಿಮೆಂಟ್ ಕ್ಯಾನ್ಸಲ್ ಮಾಡಿಕೊಳ್ಳಲು ಸುದೀಪ್ ಮುಂದಾಗಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಕಿರಣ್ ಮಜುಂದಾರ್ ಹಾಗೂ ಮೋಹನ್ ದಾಸ್ ಪೈ ಅವರಂತಹ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಯಮಿಗಳ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದು, ಬೆಂಗಳೂರಿನಲ್ಲಿರುವ ಕಿರಣ್ ಮಜುಂದಾರ್ ಸಂಸ್ಥೆಯ ಹೆಸರಿಗೆ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ.
Latest Videos