ಶಾಸಕಿ ಅಂಜಲಿ ನಿಂಬಾಳ್ಕರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ ಕನ್ನಡಿಗರು! ಕಾರಣ ಇಲ್ಲಿದೆ
ನಾವು ಜನ ಸೇವೆ ಮಾಡುತ್ತಿದ್ದು, ಜನರಿಗೆ ತಿಳಿಯುವ ಭಾಷೆಯಲ್ಲಿ ಹೇಳಬೇಕು. ಅದಕ್ಕೆ ಕನ್ನಡ ಭಾಷೆ ಜೊತೆಗೆ ಮರಾಠಿ ಭಾಷೆಗಳ ಫಲಕ ಹಾಕಿ ಅಂತ ಅಂಜಲಿ ನಿಂಬಾಳ್ಕರ್ ಹೇಳಿದ್ದಾರೆ.
ಗ್ರಾಮ ಒನ್ ಕೇಂದ್ರಗಳಲ್ಲಿ ಮರಾಠಿ (Marathi) ಭಾಷೆಯಲ್ಲಿ ಮಾಹಿತಿ ನೀಡಿ ಎಂದು ಖಾನಾಪುರ ತಹಶೀಲ್ದಾರ್ಗೆ ಸೂಚನೆ ನೀಡಿದ ಶಾಸಕಿ ಅಂಜಲಿ ನಿಂಬಾಳ್ಕರ್ (Anjali Nimbalkar) ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗ್ರಾಮ ಒನ್ ಕೇಂದ್ರದ ಉದ್ಘಾಟನೆ ವೇಳೆ ಶಾಸಕಿ ಸೂಚನೆ ನೀಡಿದ್ದಾರೆ. ಕನ್ನಡ ಭಾಷೆಯ ನಾಮಫಲಕ ಜೊತೆ ಮರಾಠಿ ಭಾಷೆಯಲ್ಲೂ ನಾಮಫಲಕ ಅಳವಡಿಸಿ. ಸಾಕಷ್ಟು ಜನರಿಗೆ ಕನ್ನಡ ಭಾಷೆ ತಿಳಿಯಲ್ಲ, ಅರ್ಥ ಆಗಲ್ಲ. ನಾವು ಜನ ಸೇವೆ ಮಾಡುತ್ತಿದ್ದು, ಜನರಿಗೆ ತಿಳಿಯುವ ಭಾಷೆಯಲ್ಲಿ ಹೇಳಬೇಕು. ಅದಕ್ಕೆ ಕನ್ನಡ ಭಾಷೆ ಜೊತೆಗೆ ಮರಾಠಿ ಭಾಷೆಗಳ ಫಲಕ ಹಾಕಿ ಅಂತ ಹೇಳಿದ್ದಾರೆ. ಈ ಸೂಚನೆ ಸಾಮಾಜಿಕ ಜಾಲತಾಣದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿಡಿಯೋ ಟ್ವೀಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ 60 ವರ್ಷಗಳಿಂದ ಕರ್ನಾಟಕದಲ್ಲಿ ಇದ್ದು ಕನ್ನಡ ಕಲಿಯದೇ ಇರುವುದು ಯಾರ ತಪ್ಪು ಅಂತಾ ಪ್ರಶ್ನೆ ಮಾಡಿದ್ದಾರೆ