ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಪೋಸ್ಟರ್ ಚಿಂದಿ ಚಿತ್ರಾನ್ನ

Updated on: May 27, 2025 | 10:42 PM

ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ್ಯ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ಕೋಟ್ಯಾಂತರ ಕರುನಾಡಿಗರ ಜೀವನಾಡಿಯಾಗಿರುವ ಹೆಮ್ಮೆಯ ಕನ್ನಡ ಭಾಷೆಗೆ ನಟ ಕಮಲ್ ಹಾಸನ್‌ ಅವರು ಅವಮಾನಿಸಿದ್ದಾರೆ. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ.

ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ್ಯ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ಕೋಟ್ಯಾಂತರ ಕರುನಾಡಿಗರ ಜೀವನಾಡಿಯಾಗಿರುವ ಹೆಮ್ಮೆಯ ಕನ್ನಡ ಭಾಷೆಗೆ ನಟ ಕಮಲ್ ಹಾಸನ್‌ ಅವರು ಅವಮಾನಿಸಿದ್ದಾರೆ. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಸಿನಿಮಾ ಬ್ಯಾನ್ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ ಕಮಲ್ ಹಾಸನ್ ಅವರನ್ನು ಸ್ವಾಗತಿಸಿ ಹಾಕಿದ್ದ ಬ್ಯಾನರ್‌ಗಳನ್ನು ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಇಂದು ಸಿನಿಮಾ ಪ್ರಮೋಷನ್‌ಗಾಗಿ ಬೆಂಗಳೂರಿಗೆ ಬಂದಿದ್ದ ನಟ ಕಮಲ್ ಹಾಸನ್‌ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲು ಕರವೇ ಸಿದ್ದವಾಗಿತ್ತು. ಕಮಲ್ ಹಾಸನ್ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕರವೇ ಕಾರ್ಯಕರ್ತರು ಬಂದಿದ್ದರು. ಆದ್ರೆ, ಕರವೇ ಕಾರ್ಯಕರ್ತರು ಬರುವಷ್ಟರಲ್ಲಿ ಕಾರ್ಯಕ್ರಮ ಮುಕ್ತಾಯವಾಗಿತ್ತು. ಆದರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ಬ್ಯಾನ್ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Published on: May 27, 2025 09:55 PM