‘ಕಾಂತಾರ 2’ ಮುಹೂರ್ತಕ್ಕೆ ಸಿದ್ಧವಾದ ಆನೆಗುಡ್ಡೆ ವಿನಾಯಕ ದೇವಸ್ಥಾನ; ಇಲ್ಲಿದೆ ವಿಡಿಯೋ

Updated on: Nov 27, 2023 | 11:36 AM

ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಇಂದು ಮುಹೂರ್ತ ನೆರವೇರಲಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ‘ಕಾಂತಾರ 2’ ತಂಡ ಕ್ಯಾಮೆರಾಗೆ ಚಾಲನೆ ನೀಡಲಿದೆ.

ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಇಂದು (ನವೆಂಬರ್ 27) ಮುಹೂರ್ತ ನೆರವೇರಲಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ‘ಕಾಂತಾರ 2’ ತಂಡ ಕ್ಯಾಮೆರಾಗೆ ಚಾಲನೆ ನೀಡಲಿದೆ. ಈ ಮೊದಲು ‘ಕಾಂತಾರ’ ಸಿನಿಮಾದ (Kantara Movie) ಮುಹೂರ್ತ ಇಲ್ಲಿಯೇ ನಡೆದಿತ್ತು. ಈ ಚಿತ್ರ ದೊಡ್ಡ ಯಶಸ್ಸು ಕಂಡಿತು. ಈ ಹಿನ್ನೆಲೆಯಲ್ಲಿ ಎರಡನೇ ಪಾರ್ಟ್​ಗೆ ಇಲ್ಲಿಯೇ ಮುಹೂರ್ತ ಮಾಡಲಾಗುತ್ತಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್​ನ ವಿಜಯ್ ಕಿರಗಂದೂರು ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಈಗಾಗಲೇ ದೇವಸ್ಥಾನದಲ್ಲಿ ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More