ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ ನೋಡಿ.

Updated on: Feb 15, 2026 | 2:56 PM

‘ಕಾಂತಾರ’ ಮೂಲಕ ಭಾರಿ ಯಶಸ್ಸು ಪಡೆದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಪತ್ನಿ, ಮಕ್ಕಳು ಸೇರಿದಂತೆ ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಬಳಿಕ ರಿಷಬ್ ಅವರ ಬೇಡಿಕೆ ಹೆಚ್ಚಾಗಿದೆ. ಹೊಸ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಫ್ಯಾಮಿಲಿಗೆ ಸಮಯ ನೀಡುತ್ತಿದ್ದಾರೆ. ರಿಷಬ್ ಅವರು ಪರಮ ದೈವಭಕ್ತ ಎಂಬುದು ಗೊತ್ತೇ ಇದೆ. ಈ ಮೊದಲು ಕೂಡ ಅವರು ಕೊಲ್ಲೂರು ಮೂಕಾಂಬಿಕೆ (Kollur Mookambika Temple) ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಬಾರಿ ಅವರ ಭೇಟಿ ಹೇಗಿತ್ತು ಎಂಬುದನ್ನು ಈ ವಿಡಿಯೋ ವಿವರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More