ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ; ಇಲ್ಲಿದೆ ಸೆಲೆಬ್ರೇಷನ್ ವಿಡಿಯೋ
ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಅವರ ಫ್ಯಾನ್ಸ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಅಕ್ಟೋಬರ್ 2ರಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ.
‘ಕಾಂತಾರ’ (Kantara Chapter 1) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಹುಟ್ಟುಹಬ್ಬದ ದಿನ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಕುಟುಂಬ ಸಮೇತ ಬಂದು ದೇವರ ದರ್ಶನ ಪಡೆದರು. ಬಳಿಕ ಅಭಿಮಾನಿಗಳ ಜೊತೆಗೂ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ವಿಶೇಷ ರೀತಿಯಲ್ಲಿ ಆಚರಿಸಿದರು. ಆನೆಗುಡ್ಡೆ ವಿನಾಯಕನ ದೇವಸ್ಥಾನದಲ್ಲಿ 108 ತೆಂಗಿನಕಾಯಿ ಒಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಅಗತ್ಯ ವಸ್ತುಗಳನ್ನು ನೀಡಿ, ಅನ್ನದಾನ ಮಾಡಲಾಗಿದೆ. ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ವಸ್ತುಗಳನ್ನು ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.