AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಋಣ ತೀರಿಸಲು ಕೆಲಸ ಮಾಡ್ತೀನಿ: ಮೈಸೂರಲ್ಲಿ ರಿಷಬ್ ಶೆಟ್ಟಿ ಭರವಸೆ

ಅಭಿಮಾನಿಗಳ ಋಣ ತೀರಿಸಲು ಕೆಲಸ ಮಾಡ್ತೀನಿ: ಮೈಸೂರಲ್ಲಿ ರಿಷಬ್ ಶೆಟ್ಟಿ ಭರವಸೆ

ಮದನ್​ ಕುಮಾರ್​
|

Updated on: Oct 16, 2025 | 9:22 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಗಿದೆ. ರಿಷಬ್ ಶೆಟ್ಟಿ ಖ್ಯಾತಿ ಹೆಚ್ಚಾಗಿದೆ. ಅನೇಕ ಊರುಗಳಿಗೆ ಈಗ ಅವರು ತೆರಳಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ಇಂದು (ಅ.16) ಮೈಸೂರಿಗೆ ರಿಷಬ್ ಶೆಟ್ಟಿ ಭೇಟಿ ನೀಡಿದರು. ಅವರ ಅಭಿಮಾನಿಗಳಿಗೆ ಖುಷಿ ಆಯಿತು.

ಸೂಪರ್ ಹಿಟ್ ಆಗಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಾಗಿದೆ. ಈಗ ಅವರು ಅನೇಕ ಊರುಗಳಿಗೆ ತೆರಳಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ಇಂದು (ಅಕ್ಟೋಬರ್ 16) ಮೈಸೂರಿಗೆ ರಿಷಬ್ ಶೆಟ್ಟಿ ಭೇಟಿ ನೀಡಿದರು. ಅವರನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಯಿತು. ಎಲ್ಲರೂ ಜೈಕಾರ ಕೂಗಿದರು. ‘ಇದು ದೊಡ್ಡ ಋಣ. ಈ ಋಣ ತೀರಿಸಲು ಪ್ರತಿ ಸಿನಿಮಾದಲ್ಲಿ ಇನ್ನೂ ಹೆಚ್ಚು ಶ್ರಮವಹಿಸಿ ಕೆಲಸ ಮಾಡುತ್ತೇವೆ. ಇನ್ನೂ ಒಳ್ಳೊಳ್ಳೆಯ ಕಥೆಯನ್ನು ನಿಮಗೆ ಹೇಳುತ್ತೇನೆ’ ಎಂದು ರಿಷಬ್ ಶೆಟ್ಟಿ (Rishab Shetty) ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More