‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ‘ಕಾಂತಾರ: ಚಾಪ್ಟರ್ 1’ ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈಗ ಸಿನಿಮಾ ಬಗ್ಗೆ ಒಂದಷ್ಟು ವಿಚಾರಗಳು ರಿವೀಲ್ ಆಗಿವೆ. ಟ್ರೇಲರ್ ಲಾಂಚ್ ಈವೆಂಟ್ನಲ್ಲಿ ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘ಇದು ಕದಂಬರ ಕಥೆ ಅಲ್ಲ’ ಎಂದು ಹೇಳಿದ್ದಾರೆ.
‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಕದಂಬರ ಕಥೆ ಇದೆ ಎಂದೆಲ್ಲ ಹೇಳಲಾಗಿತ್ತು. ಇದಕ್ಕೆ ರಿಷಬ್ ಶೆಟ್ಟಿ ಅವರು ಸ್ಪಷ್ಟನೆ ನೀಡಿದ್ದಾರೆ. ‘ಈ ಕಥೆ ಕಂದಬರ ಬಗ್ಗೆ ಅಲ್ಲ. ಕರಾವಳಿ ಭಾಗದಲ್ಲಿ ನಡೆದ ಕಥೆ. 4-5ನೇ ಶತಮಾನದಲ್ಲಿ ನಡೆದ ಕಥೆ ಇದು’ ಎಂದು ರಿಷಬ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

