AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಯಶಸ್ಸಿನ ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ‌ ವಿಜಯ್ ಕಿರಗಂದೂರು ಭೇಟಿ

‘ಕಾಂತಾರ’ ಯಶಸ್ಸಿನ ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ‌ ವಿಜಯ್ ಕಿರಗಂದೂರು ಭೇಟಿ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಮದನ್​ ಕುಮಾರ್​|

Updated on: Oct 10, 2025 | 7:26 PM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಸೂಪರ್ ಹಿಟ್ ಆದ ಈ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಕಟೀಲು ಕ್ಷೇತ್ರಕ್ಕೆ ಬಂದಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ‌ ಭೇಟಿ ನೀಡಿದ ಅವರು ದೇವಿಯ ದರ್ಶನ ಪಡೆದಿದ್ದಾರೆ.

‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ವಿಶ್ವಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಸೂಪರ್ ಹಿಟ್ ಆಗಿರುವ ಈ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ‌ (Kateel Shri Durgaparameshwari Temple) ಭೇಟಿ ನೀಡಿದ ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಯಶಸ್ವಿ ಆಗಿರುವ ಹಿನ್ನೆಲೆಯಲ್ಲಿ ಅವರು ಕಟೀಲು ಕ್ಷೇತ್ರಕ್ಕೆ ಬಂದಿದ್ದಾರೆ. ವಿಜಯ್ ಕಿರಗಂದೂರು ಅವರಿಗೆ ಸ್ನೇಹಿತರು ಸಾಥ್ ನೀಡಿದ್ದಾರೆ. ಕ್ಷೇತ್ರದಲ್ಲೇ ವಿಜಯ್ ಕಿರಗಂದೂರು (Vijay Kiragandur) ಅವರು ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ಈ ಸಿನಿಮಾದಿಂದ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಅವರ ಖ್ಯಾತಿ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.