Sapthami Gowda: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ‘ಕಾಂತಾರ’ ನಟಿ ಸಪ್ತಮಿ ಗೌಡ
Kateel Durga Parameshwari Temple: ನಟಿ ಸಪ್ತಮಿ ಗೌಡ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ದೇಶಾದ್ಯಂತ ಸೂಪರ್ ಹಿಟ್ ಆದ ‘ಕಾಂತಾರ’ (Kantara Movie) ಸಿನಿಮಾದಿಂದ ನಟಿ ಸಪ್ತಮಿ ಗೌಡ ಅವರಿಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ಇದು ಅವರ ಎರಡನೇ ಸಿನಿಮಾ. ಮುಂದಿನ ಸಿನಿಮಾದ ಕೆಲಸಗಳು ಆರಂಭ ಆಗುವುದಕ್ಕೂ ಮುನ್ನ ಅವರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ (Kateel Durga Parameshwari Temple) ಬಂದು ಅವರು ಪೂಜೆ ಸಲ್ಲಿಸಿದ್ದಾರೆ. ಅವರಿಗೆ ಕುಟುಂಬದವರು ಸಾಥ್ ನೀಡಿದ್ದಾರೆ. ‘ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ. ಕಾಂತಾರ ಚಿತ್ರ ಮಾಡುವಾಗ ತಿಳಿಯಿತು’ ಎಂದು ಸಪ್ತಮಿ ಗೌಡ (Sapthami Gowda) ಹೇಳಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿದ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 16, 2022 11:57 AM
Latest Videos