ಬಹುನಿರೀಕ್ಷಿತ ‘ಕಾಂತಾರ’ (Kantara) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ (Rishab Shetty) ಹೀರೋ ಆಗಿ ನಟಿಸಿದ್ದು, ಅವರಿಗೆ ಸಪ್ತಮಿ ಗೌಡ ಜೋಡಿ ಆಗಿದ್ದಾರೆ. ಮೊದಲ ದಿನ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಲು ಬೆಂಗಳೂರಿನ ಸಂತೋಷ್ ಚಿತ್ರಮಂದಿರಕ್ಕೆ ಇಡೀ ಟೀಮ್ ಆಗಮಿಸಿದೆ. ಈ ವೇಳೆ ಥಿಯೇಟರ್ ಮುಂಭಾಗದಲ್ಲಿ ನೆರೆದಿದ್ದ ಜನರ ನಡುವೆ ಸಪ್ತಮಿ ಗೌಡ (Sapthami Gowda) ಅವರು ಬಿಂದಾಸ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಅವರೊಂದಿಗೆ ನಟ ಪ್ರಮೋದ್ ಶೆಟ್ಟಿ ಕೂಡ ಹೆಜ್ಜೆ ಹಾಕಿದ್ದಾರೆ. ಎಲ್ಲೆಡೆಯಿಂದ ‘ಕಾಂತಾರ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ನಲ್ಲಿ ಈ ಸಿನಿಮಾ ಮೂಡಿಬಂದಿದೆ.