ಹೊಸಕೋಟೆ ಅದ್ದೂರಿ ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಹೂ ಮಂಡಿ ಸರ್ಕಲ್ ಬಳಿ ಆಯೋಜಿಸಿದ್ದ ಅದ್ದೂರಿ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ಶರತ್ ಬಚ್ಚೇಗೌಡ ಹಾಗೂ ಮಾಜಿ ಸಂಸದ ಬಚ್ಚೇಗೌಡ ದೀಪ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ. ಇನ್ನು ನವರಾತ್ರಿ ಉತ್ಸವದ ಪ್ರಯುಕ್ತ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದು, ಕಾಂತಾರ ಚಿತ್ರದ ಪಂಜುರ್ಲಿ ನೃತ್ಯಕ್ಕೆ ಚಪ್ಪಾಳೆ, ಸಿಳ್ಳೆ ಹೊಡೆದು ನೆರೆದಿದ್ದ ಜನರು ಸಂಭ್ರಮಿಸಿದರು.
ಬೆಂಗಳೂರು ಗ್ರಾಮಾಂತರ, ಅ.07: ರಾಜ್ಯದೆಲ್ಲೆಡೆ ನಾಡಹಬ್ಬ ದಸರಾದ ನವರಾತ್ರಿ ಉತ್ಸವ ರಂಗೇರಿದ್ದು, ಹೊಸಕೋಟೆಯಲ್ಲೂ ಇದೇ ಮೊದಲ ಬಾರಿಗೆ ಕಮ್ಮ ಸಮುದಾಯದಿಂದ ನವರಾತ್ರಿ ಉತ್ಸವವನ್ನ ಹಮ್ಮಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಹೂ ಮಂಡಿ ಸರ್ಕಲ್ ಬಳಿ ಆಯೋಜಿಸಿದ್ದ ಅದ್ದೂರಿ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ಶರತ್ ಬಚ್ಚೇಗೌಡ ಹಾಗೂ ಮಾಜಿ ಸಂಸದ ಬಚ್ಚೇಗೌಡ ದೀಪ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ. ಇನ್ನು ನವರಾತ್ರಿ ಉತ್ಸವದ ಪ್ರಯುಕ್ತ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದು, ಕಲಾವಿದರು ವಿವಿಧ ಹಾಸ್ಯನಟರು ಪ್ರದರ್ಶನ ನೀಡುವ ಮೂಲಕ ನೆರೆದಿದ್ದ ಜನರನ್ನ ರಂಜಿಸಿದರು. ಇನ್ನು ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಕಾಂತಾರ ಹಾಡು ಹಾಗೂ ನೃತ್ಯ ಎಲ್ಲರ ಗಮನ ಸೆಳೆದಿದ್ದು, ಕಾಂತಾರ ಚಿತ್ರದ ಪಂಜುರ್ಲಿ ನೃತ್ಯಕ್ಕೆ ಚಪ್ಪಾಳೆ, ಸಿಳ್ಳೆ ಹೊಡೆದು ನೆರೆದಿದ್ದ ಜನರು ಸಂಭ್ರಮಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

