Rishab Shetty: ‘ಕಾಂತಾರ’ ಹೀರೋ ರಿಷಬ್​ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಕಲಬುರಗಿ ಅಭಿಮಾನಿಗಳು

Kantara Movie | Kalaburagi News: ರಿಷಬ್​ ಶೆಟ್ಟಿ ಅವರನ್ನು ನೋಡಲು ಅಪಾರ ಸಂಖ್ಯೆಯ ಫ್ಯಾನ್ಸ್​ ಜಮಾಯಿಸಿದ್ದರು. ನೆಚ್ಚಿನ ನಟನ ಜತೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬಿದ್ದರು.

Rishab Shetty: ‘ಕಾಂತಾರ’ ಹೀರೋ ರಿಷಬ್​ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಕಲಬುರಗಿ ಅಭಿಮಾನಿಗಳು
| Updated By: ಮದನ್​ ಕುಮಾರ್​

Updated on:Dec 02, 2022 | 6:07 PM

ನಟ ರಿಷಬ್​ ಶೆಟ್ಟಿ (Rishab Shetty) ಈಗ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ‘ಕಾಂತಾರ’ (Kantara Movie) ಚಿತ್ರದಿಂದ ಅವರಿಗೆ ಈ ಪರಿ ಜನಪ್ರಿಯತೆ ಸಿಕ್ಕಿದೆ. ಇಂದು (ಡಿ.2) ರಿಷಬ್​ ಶೆಟ್ಟಿ ಅವರಿಗೆ ಕಲಬುರಗಿಯಲ್ಲಿ (Kalaburagi) ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಅವರನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ನೆಚ್ಚಿನ ನಟನ ಜೊತೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬಿದ್ದರು. ರಿಷಬ್​ ಶೆಟ್ಟಿ ಅವರ ಮುಂದಿನ ಪ್ರಾಜೆಕ್ಟ್​ ಯಾವುದು ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:07 pm, Fri, 2 December 22

Follow us