ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮೂರು ದಿನಗಳ ಕಾಲ ವಾರಾಹಿ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ಕೊನೇ ದಿನ ರಿಷಬ್ ಶೆಟ್ಟಿ ಅವರು ಪತ್ನಿ ಮತ್ತು ಮಕ್ಕಳ ಜೊತೆ ಬಂದು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮುಂಜಾನೆವರೆಗೂ ಇದ್ದ ಅವರು ದೈವದ ಬಳಿ ಪ್ರಾರ್ಥನೆ ಮಾಡಿಕೊಂಡರು. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..
ವಾರಾಹಿ ಪಂಜುರ್ಲಿ (Varahi Panjurli) ದೈವದ ನೇಮೋತ್ಸವದಲ್ಲಿ ನಟ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಭಾಗಿಯಾಗಿದ್ದಾರೆ. ಪುತ್ರ ರಣ್ವಿತ್ ಶೆಟ್ಟಿ ಜನ್ಮದಿನದಂದೇ ಅವರು ನೇಮೋತ್ಸವದಲ್ಲಿ ಪಾಲ್ಗೊಂಡರು. ಮುಂದಿನ 5 ತಿಂಗಳಲ್ಲಿ ಒಳ್ಳೆಯದು ಮಾಡುವುದಾಗಿ ರಿಷಬ್ ಶೆಟ್ಟಿ ಅವರಿಗೆ ದೈವ ಭರವಸೆ ನೀಡಿದೆ. ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅವರಿಗೆ ಚಿತ್ರೀಕರಣದ ವೇಳೆ ಕೆಲವು ವಿಘ್ನಗಳು ಎದುರಾಗಿದ್ದವು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಬಾರೆಬೈಲ್ನಲ್ಲಿ ಇರುವ ಪಂಜುರ್ಲಿ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ (Rishab Shetty) ಭೇಟಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 07, 2025 03:53 PM
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
