ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್

Updated on: May 21, 2026 | 12:02 PM

ನಟಿ ಶ್ರುತಿ ಪ್ರಕಾಶ್ ಹಾಗೂ ಕರಣ್ ಕುಂದ್ರಾ ಅವರು ಮರಭೂಮಿಯ ಸುಂದರ ಪರಿಸರದಲ್ಲಿ ಆತ್ಮೀಯರ ಸಮ್ಮುಖದಲ್ಲಿ ಪರಸ್ಪರ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಮನಮೋಹಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಕರಣ್ ಕುಂದ್ರಾ ಹಾಗೂ ಶ್ರುತಿ ಪ್ರಕಾಶ್ ಹಿಂದಿ ಬಿಗ್ ಬಾಸ್ ಮೂಲಕ ಪರಸ್ಪರ ಪರಿಚಯ ಆದವರು. ಈಗ ಕರಣ್ ಕುಂದ್ರಾ ಅವರು ಶ್ರುತಿಗೆ ಪ್ರಪೋಸ್ ಮಾಡಿದ್ದಾರೆ. ಮರಭೂಮಿಯ ಹಿನ್ನೆಲೆಯಲ್ಲಿ ಹೂವುಗಳಿಂದ ಅಲಂಕೃತಗೊಂಡ ವಿಶೇಷ ವೇದಿಕೆಯಲ್ಲಿ, ಮಂಡಿಯೂರಿ ಕರಣ್ ಕುಂದ್ರಾ ಪ್ರೀತಿ ಹೇಳಿಕೊಂಡಿದ್ದಾರೆ. ಈ ಸುಂದರ ಕ್ಷಣಕ್ಕೆ ಸಾಕ್ಷಿಯಾದ ಆಪ್ತರು ಹಾಗೂ ಸ್ನೇಹಿತರು ಚಪ್ಪಾಳೆ ತಟ್ಟಿ ಸಡಗರದಿಂದ ನವಜೋಡಿಗೆ ಶುಭ ಹಾರೈಸಿದರು. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಘಟನೆ ಹೇಳುವಾಗ ಶ್ರುತಿ ಕಣ್ಣೀರು ಹಾಕಿದರು. ಇದು ರಿಯಾಲಿಟಿ ಶೋ ಒಂದರ ಭಾಗ ಆಗಿತ್ತು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More