ಕೋಲಾರದಲ್ಲಿ ಪ್ರಭುದೇವ ಆಸ್ತಿ ಖರೀದಿ; ಫೋಟೋಗೆ ಮುಗಿಬಿದ್ದ ಅಭಿಮಾನಿಗಳು
ಯೋಗರಾಜ್ ಭಟ್ ನಿರ್ದೇಶನದ ‘ಕರಟಕ ದಮನಕ’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಮತ್ತು ಪ್ರಭುದೇವ ಅವರು ತೆರೆಹಂಚಿಕೊಂಡಿದ್ದಾರೆ. ಇತ್ತೀಚೆಗೆಷ್ಟೇ ಆ ಸಿನಿಮಾ ಬಿಡುಗಡೆ ಆಯಿತು. ಈಗ ಪ್ರಭುದೇವ ಅವರು ಆಸ್ತಿ ಖರೀದಿಸುವ ಸಲುವಾಗಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿಗೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..
ನಟ, ನಿರ್ದೇಶಕ, ಕೊರಿಯೋಗ್ರಾಫರ್ ಪ್ರಭುದೇವ (Prabhu Deva) ಅವರು ಕೋಲಾರಕ್ಕೆ ಆಗಮಿಸಿದ್ದಾರೆ. ಆಸ್ತಿ (Prabhu Deva property) ಖರೀದಿ ಸಲುವಾಗಿ ಅವರು ಇಲ್ಲಿಗೆ ಬಂದಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಉಪನೋಂದಣಾಧಿಕಾರಿ ಕಚೇರಿಗೆ ಪ್ರಭುದೇವ ಬಂದಾಗ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪ್ರಭುದೇವ ಜೊತೆ ಫೋಟೋ ತೆಗೆದುಕೊಳ್ಳಲು ಫ್ಯಾನ್ಸ್ (Prabhu Deva Fans) ಪ್ರಯತ್ನಿಸಿದ್ದಾರೆ. ಕರ್ನಾಟಕದವರೇ ಆದ ಪ್ರಭುದೇವ ಅವರು ಹೆಚ್ಚು ಫೇಮಸ್ ಆಗಿದ್ದು ತಮಿಳು ಚಿತ್ರರಂಗದಲ್ಲಿ. ನೃತ್ಯ ನಿರ್ದೇಶನದ ಜೊತೆಗೆ ಹೀರೋ ಆಗಿಯೋ ಅವರು ಬೇಡಿಕೆ ಸೃಷ್ಟಿಸಿಕೊಂಡರು. ನಿರ್ದೇಶಕನಾಗಿ ಬಾಲಿವುಡ್ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಕನ್ನಡದಲ್ಲಿಯೂ ನಟಿಸಿರುವ ಪ್ರಭುದೇವ ಅವರಿಗೆ ಕರುನಾಡಿನಾದ್ಯಂತ ಅಭಿಮಾನಿಗಳು ಇದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ಕರಟಕ ದಮನಕ’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಜೊತೆ ಪ್ರಭುದೇವ ನಟಿಸಿದ್ದಾರೆ. ಆ ಸಿನಿಮಾಗೆ ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದಾರೆ. ‘ಲಕ್ಕಿ ಮ್ಯಾನ್’ ಸಿನಿಮಾದ ಒಂದು ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್ ರಾಜ್ಕುಮಾರ್ ಅವರು ಜೊತೆಯಾಗಿ ಹೆಜ್ಜೆ ಹಾಕಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.