ಪಂಜಾಬ್‌ನಲ್ಲಿ ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳಲ್ಲಿ ಬೆಂಕಿ; ಜೀವ ಉಳಿಸಿಕೊಂಡ ಪ್ರಯಾಣಿಕರು

Updated on: Nov 06, 2026 | 4:47 PM

ರೈಲು ರಾಜಪುರ ಜಂಕ್ಷನ್ ತಲುಪುತ್ತಿದ್ದಂತೆ ಬೋಗಿಯೊಂದರಿಂದ ದಟ್ಟ ಹೊಗೆ ಹೊರಬರಲು ಪ್ರಾರಂಭಿಸಿತು. ಕೆಲವೇ ಕ್ಷಣಗಳಲ್ಲಿ ಬೆಂಕಿಯ ಜ್ವಾಲೆಗಳು ಪಕ್ಕದ ಬೋಗಿಗಳಿಗೂ ಹರಡಲು ಪ್ರಾರಂಭಿಸಿದವು. ಬೆಂಕಿಯನ್ನು ಕಂಡ ತಕ್ಷಣವೇ ಪ್ರಯಾಣಿಕರು ಚೀರಾಡುತ್ತಾ ಬಾಗಿಲುಗಳತ್ತ ಧಾವಿಸಿದರು. ತಕ್ಷಣ ಸಮಯಪ್ರಜ್ಞೆ ತೋರಿದ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದರು. ರೈಲು ನಿಲ್ಲಿಸಿದ ತಕ್ಷಣವೇ ಪ್ರಯಾಣಿಕರು ತಮ್ಮ ಲಗೇಜ್‌ಗಳೊಂದಿಗೆ ರೈಲಿನಿಂದ ಕೆಳಗೆ ಜಿಗಿದು ಜೀವ ಉಳಿಸಿಕೊಂಡರು. ಸ್ಥಳೀಯ ಸಾರ್ವಜನಿಕರು ಹಾಗೂ ರೈಲ್ವೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರ ರಕ್ಷಣೆಗೆ ನೆರವಾದರು.

ರಾಜಪುರ, ನವೆಂಬರ್ 6: ಪಂಜಾಬ್‌ನ ಪಟಿಯಾಲ ಜಿಲ್ಲೆಯ ರಾಜಪುರ ರೈಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನ ಹಲವು ಬೋಗಿಗಳಲ್ಲಿ ಇದ್ದಕ್ಕಿದ್ದಂತೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಹಾಗೂ ಕಾಲ್ತುಳಿತದ ವಾತಾವರಣ ನಿರ್ಮಾಣವಾಯಿತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಜಾಗರೂಕರಾದ ರೈಲ್ವೆ ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತರಲು ಕ್ರಮ ಕೈಗೊಂಡರು.

ರೈಲು ರಾಜಪುರ ಜಂಕ್ಷನ್ ತಲುಪುತ್ತಿದ್ದಂತೆ ಬೋಗಿಯೊಂದರಿಂದ ದಟ್ಟ ಹೊಗೆ ಹೊರಬರಲು ಪ್ರಾರಂಭಿಸಿತು. ಕೆಲವೇ ಕ್ಷಣಗಳಲ್ಲಿ ಬೆಂಕಿಯ ಜ್ವಾಲೆಗಳು ಪಕ್ಕದ ಬೋಗಿಗಳಿಗೂ ಹರಡಲು ಪ್ರಾರಂಭಿಸಿದವು. ಬೆಂಕಿಯನ್ನು ಕಂಡ ತಕ್ಷಣವೇ ಪ್ರಯಾಣಿಕರು ಚೀರಾಡುತ್ತಾ ಬಾಗಿಲುಗಳತ್ತ ಧಾವಿಸಿದರು. ತಕ್ಷಣ ಸಮಯಪ್ರಜ್ಞೆ ತೋರಿದ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದರು. ರೈಲು ನಿಲ್ಲಿಸಿದ ತಕ್ಷಣವೇ ಪ್ರಯಾಣಿಕರು ತಮ್ಮ ಲಗೇಜ್‌ಗಳೊಂದಿಗೆ ರೈಲಿನಿಂದ ಕೆಳಗೆ ಜಿಗಿದು ಜೀವ ಉಳಿಸಿಕೊಂಡರು. ಸ್ಥಳೀಯ ಸಾರ್ವಜನಿಕರು ಹಾಗೂ ರೈಲ್ವೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರ ರಕ್ಷಣೆಗೆ ನೆರವಾದರು.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಭಾರಿ ಹರಸಾಹಸ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿ ಹೊತ್ತಿಕೊಂಡ ಬೋಗಿಗಳನ್ನು ರೈಲಿನ ಉಳಿದ ಭಾಗದಿಂದ ಬೇರ್ಪಡಿಸಿ ಹೆಚ್ಚಿನ ಅನಾಹುತ ತಪ್ಪಿಸಲಾಯಿತು. ರೈಲ್ವೆ ಅಧಿಕಾರಿಗಳು ತಕ್ಷಣವೇ ಚುರುಕಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಭಾರಿ ಪ್ರಾಣಾಪಾಯ ತಪ್ಪಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವೇ ಅಥವಾ ಯಾವುದಾದರೂ ತಾಂತ್ರಿಕ ದೋಷವೇ ಎಂಬುದರ ಕುರಿತು ರೈಲ್ವೆ ಇಲಾಖೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More