ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ

Updated on: Mar 24, 2026 | 12:35 PM

‘ಕರ್ಣ’ ಧಾರಾವಾಹಿ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆದಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಗಮನ ಸೆಳೆದಿದೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಕರ್ಣ ಧಾರಾವಾಹಿ ತೆಲುಗಿಗೆ ಡಬ್ ಆಗಿದೆ. 

‘ಕರ್ಣ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಂಡು ಗಮನ ಸೆಳೆದಿದೆ. ಈಗ ಈ ಧಾರಾವಾಹಿ ತೆಲುಗಿಗೆ ಡಬ್ ಆಗಿದೆ. ಜೀ ತೆಲುಗಿನಲ್ಲಿ ಸೀರಿಯಲ್ ಪ್ರಸಾರ ಕೂಡ ಆರಂಭಿಸಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಇನ್ನು ತೆಲುಗು ವೀಕ್ಷಕರಿಗೂ ಪರಿಚಯಗೊಳ್ಳಲಿದ್ದಾರೆ. ಕನ್ನಡದಲ್ಲಿ ಧಾರಾವಾಹಿ ನಂಬರ್ 1 ಸ್ಥಾನದಲ್ಲಿದೆ. ಇನ್ನು ಪರಭಾಷೆಯ ಜನರು ಇದನ್ನು ಹೇಗೆ ಸ್ವಾಗತಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Mar 24, 2026 11:50 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More