ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ರಾಜ್ಯಕ್ಕೆ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು? ಮುಂದಿನ ಗುರಿ ಬಿಚ್ಚಿಟ್ಟ ಟಾಪರ್
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆಯುವ ಮೂಲಕ ಅಮೂಲ್ಯ ಕಾಮತ್ ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ. ಇನ್ನು ಪರೀಕ್ಷೆಯ ತಯಾರಿ ಹೇಗಿತ್ತು? ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಬೆಂಗಳೂರು, (ಏಪ್ರಿಲ್ 08): ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆಯುವ ಮೂಲಕ ಅಮೂಲ್ಯ ಕಾಮತ್ ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ. ಇನ್ನು ಅಮೂಲ್ಯ ಕಾಮತ್ ಟಿವಿ9 ಜೊತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ.
‘ರ‍್ಯಾಂಕ್ ಬರುವ ನಿರೀಕ್ಷೆ ಇತ್ತು. ಕಾಲೇಜಿನಲ್ಲಿ ಉಪನ್ಯಾಸಕರೂ ನಿನ್ನಿಂದ ಸಾಧ್ಯ ಎಂದು ಹೇಳುತ್ತಿದ್ದರು. ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿ ಅಧ್ಯಯನ ಮಾಡಿರುವುದರಿಂದ ಮುಂದೆ ಇಂಜಿನಿಯರ್ ಆಗಬೇಕೆಂಬುದು ನನ್ನ ಬಯಕೆ. ಭರತನಾಟ್ಯದಲ್ಲಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ತರಬೇತು ಪಡೆದಿದ್ದು, ಪುಸ್ತಕ ಓದುವುದೆಂದರೆ ತುಂಬಾ ಇಷ್ಟ’ ಎನ್ನುತ್ತಾರೆ ಅಮೂಲ್ಯ. ಹಾಗೇ ಟಾಪರ್ ಬಂದಿರುವುದರ ಹಿಂದಿನ ತಯಾರಿ ಹೇಗಿತ್ತು? ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.