ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ರಾಜ್ಯಕ್ಕೆ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು? ಮುಂದಿನ ಗುರಿ ಬಿಚ್ಚಿಟ್ಟ ಟಾಪರ್​

Edited By:

Updated on: Apr 08, 2025 | 3:20 PM

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆಯುವ ಮೂಲಕ ಅಮೂಲ್ಯ ಕಾಮತ್ ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ. ಇನ್ನು ಪರೀಕ್ಷೆಯ ತಯಾರಿ ಹೇಗಿತ್ತು? ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ಏಪ್ರಿಲ್ 08): ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆಯುವ ಮೂಲಕ ಅಮೂಲ್ಯ ಕಾಮತ್ ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ. ಇನ್ನು ಅಮೂಲ್ಯ ಕಾಮತ್ ಟಿವಿ9 ಜೊತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

‘ರ‍್ಯಾಂಕ್ ಬರುವ ನಿರೀಕ್ಷೆ ಇತ್ತು. ಕಾಲೇಜಿನಲ್ಲಿ ಉಪನ್ಯಾಸಕರೂ ನಿನ್ನಿಂದ ಸಾಧ್ಯ ಎಂದು ಹೇಳುತ್ತಿದ್ದರು. ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿ ಅಧ್ಯಯನ ಮಾಡಿರುವುದರಿಂದ ಮುಂದೆ ಇಂಜಿನಿಯರ್ ಆಗಬೇಕೆಂಬುದು ನನ್ನ ಬಯಕೆ. ಭರತನಾಟ್ಯದಲ್ಲಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ತರಬೇತು ಪಡೆದಿದ್ದು, ಪುಸ್ತಕ ಓದುವುದೆಂದರೆ ತುಂಬಾ ಇಷ್ಟ’ ಎನ್ನುತ್ತಾರೆ ಅಮೂಲ್ಯ. ಹಾಗೇ ಟಾಪರ್​ ಬಂದಿರುವುದರ ಹಿಂದಿನ ತಯಾರಿ ಹೇಗಿತ್ತು? ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: Karnataka 2nd PUC Result 2025 Highlights: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿವೆ ಮುಖ್ಯಾಂಶಗಳು

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More