AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ, ಪಾಸಾದವರು ಎಷ್ಟು ಗೊತ್ತಾ?

ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ, ಪಾಸಾದವರು ಎಷ್ಟು ಗೊತ್ತಾ?

ವಿನಯ್​ ಕಾಶಪ್ಪನವರ್​
| Edited By: |

Updated on:Apr 09, 2026 | 4:01 PM

Share

ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆನ್​​ಲೈನಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಅಧಿಕೃತ ವೆಬ್‌ಸೈಟ್‌ https://www.karresults.nic.in/ ಮೂಲಕ ಫಲಿತಾಂಶ ಪರಿಶೀಲನೆ ಮಾಡಿಕೊಳ್ಳಬಹುದು. ಇನ್ನು ಈ ಬಾರಿ ಪಿಯುಸಿ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (Karnataka 2nd PUC result 2026 declared)  ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆನ್​​ಲೈನಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಅಧಿಕೃತ ವೆಬ್‌ಸೈಟ್‌ https://www.karresults.nic.in/ ಮೂಲಕ ಫಲಿತಾಂಶ ಪರಿಶೀಲನೆ ಮಾಡಿಕೊಳ್ಳಬಹುದು. ಇನ್ನು ಈ ಬಾರಿ ಪಿಯುಸಿ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ.

ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್​​​ಲೈನ್​​​ನಲ್ಲಿ ರಿಸಲ್ಟ್ ಪ್ರಕಟ

Published on: Apr 09, 2026 03:56 PM

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More