ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ, ಪಾಸಾದವರು ಎಷ್ಟು ಗೊತ್ತಾ?
ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆನ್ಲೈನಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಅಧಿಕೃತ ವೆಬ್‌ಸೈಟ್ https://www.karresults.nic.in/ ಮೂಲಕ ಫಲಿತಾಂಶ ಪರಿಶೀಲನೆ ಮಾಡಿಕೊಳ್ಳಬಹುದು. ಇನ್ನು ಈ ಬಾರಿ ಪಿಯುಸಿ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ
ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (Karnataka 2nd PUC result 2026 declared) ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆನ್ಲೈನಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಅಧಿಕೃತ ವೆಬ್‌ಸೈಟ್ https://www.karresults.nic.in/ ಮೂಲಕ ಫಲಿತಾಂಶ ಪರಿಶೀಲನೆ ಮಾಡಿಕೊಳ್ಳಬಹುದು. ಇನ್ನು ಈ ಬಾರಿ ಪಿಯುಸಿ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ.
ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್ಲೈನ್ನಲ್ಲಿ ರಿಸಲ್ಟ್ ಪ್ರಕಟ
Published on: Apr 09, 2026 03:56 PM
Follow Us
