ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್:ನೋವಲ್ಲೂ ಸಾಧಿಸಿದ ದಿಶಾ

Edited By:

Updated on: Apr 09, 2026 | 11:13 PM

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ದಿಶಾ, ವಾಣಿಜ್ಯ ವಿಭಾಗದಲ್ಲಿ (ಕಾಮರ್ಸ್) 600ಕ್ಕೆ 600 ಅಂಕ ಗಳಿಸಿ ದಕ್ಷಿಣ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡು ಮನಸ್ಸಿನಲ್ಲಿ ದುಃಖ, ಕಣ್ಣಲ್ಲಿ ನೀರು ತುಂಬಿಕೊಂಡು ಧೃತಿಗೆಡದೇ ಪರೀಕ್ಷೆ ಬರೆದು ಈಗ ಕರ್ನಾಟಕದ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಈ ಮೂಲಕ ಮಾದರಿಯಾಗಿದ್ದಾಳೆ. ಇನ್ನು ದಿಶಾ ಸಾಧನೆಗೆ ಕುಟುಂಬಸ್ಥರು, ಕಾಲೇಜು ಆಡಳಿತ ಮಂಡಲಿ ಶುಭಾಶಯಗಳನ್ನ ತಿಳಿಸಿದೆ.

ಮಂಗಳೂರು, (ಏಪ್ರಿಲ್ 09): ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ದಿಶಾ, ವಾಣಿಜ್ಯ ವಿಭಾಗದಲ್ಲಿ (ಕಾಮರ್ಸ್) 600ಕ್ಕೆ 600 ಅಂಕ ಗಳಿಸಿ ದಕ್ಷಿಣ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡು ಮನಸ್ಸಿನಲ್ಲಿ ದುಃಖ, ಕಣ್ಣಲ್ಲಿ ನೀರು ತುಂಬಿಕೊಂಡು ಧೃತಿಗೆಡದೇ ಪರೀಕ್ಷೆ ಬರೆದು ಈಗ ಕರ್ನಾಟಕದ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಈ ಮೂಲಕ ಮಾದರಿಯಾಗಿದ್ದಾಳೆ. ಇನ್ನು ದಿಶಾ ಸಾಧನೆಗೆ ಕುಟುಂಬಸ್ಥರು, ಕಾಲೇಜು ಆಡಳಿತ ಮಂಡಲಿ ಶುಭಾಶಯಗಳನ್ನ ತಿಳಿಸಿದೆ.

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More