ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್ ಪುತ್ರಿ ಕರ್ನಾಟಕಕ್ಕೆ ಫಸ್ಟ್
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಲಾರಿ ಡ್ರೈವರ್ನ ಪುತ್ರಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾಳೆ. ವಿಜಯನಗರ ಜಿಲ್ಲೆಯ ಸಂಜನಾ ಬಾಯಿ ಕಲಾ ವಿಭಾಗದಲ್ಲಿ 600 ಅಂಕಗಳಿಗೆ 597 ಅಂಕ ಪಡೆದ ಟಾಪರ್ ಆಗಿದ್ದಾಳೆ. ಇನ್ನು ಈ ಸಂಜನಾ ಲಾಡಿ ಡ್ರೈವರ್ ಪುತ್ರಿ ಎನ್ನುವುದು ವಿಶೇಷ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ಬಾಯಿ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನಲ್ಲಿ ಓದುತ್ತಿದ್ದಳು.
ವಿಜಯನಗರ, (ಏಪ್ರಿಲ್ 08): 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು (ಏಪ್ರಿಲ್ 08) ಪ್ರಕಟವಾಗಿದ್ದು (Karnataka 2nd PUC Result Announced), ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಯಾದಗಿರಿ ಕೊನೆ ಸ್ಥಾನದಲ್ಲಿ ಇದೆ. ಇನ್ನು ಈ ಬಾರಿಯೂ ಸಹ ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಲಾರಿ ಡ್ರೈವರ್ನ ಮಗಳು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾಳೆ. ಹೌದು.. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾ ಬಾಯಿ ಟಾಪರ್ ಆಗಿದ್ದಾರೆ. 600ಕ್ಕೆ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ಬಾಯಿ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇನ್ನು ವಿಶೇಷ ಅಂದರೆ ಸಂಜನಾ ಬಾಯಿ ಲಾರಿ ಡ್ರೈವರ್ ಪುತ್ರಿ.
ಇದನ್ನೂ ಓದಿ: Karnataka 2nd PUC Result 2025 Highlights: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿವೆ ಮುಖ್ಯಾಂಶಗಳು

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್

ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
