AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶವಂತರಾಯಗೌಡ ರಾಜೀನಾಮೆ ಎಫೆಕ್ಟ್: ಬರ ಪಟ್ಟಿಗೆ ಹೊಸದಾಗಿ 29 ತಾಲೂಕುಗಳ ಸೇರ್ಪಡೆ

ಯಶವಂತರಾಯಗೌಡ ರಾಜೀನಾಮೆ ಎಫೆಕ್ಟ್: ಬರ ಪಟ್ಟಿಗೆ ಹೊಸದಾಗಿ 29 ತಾಲೂಕುಗಳ ಸೇರ್ಪಡೆ

ಅಕ್ಷಯ್​ ಪಲ್ಲಮಜಲು​​
|

Updated on: Sep 24, 2026 | 12:28 PM

Share

ಕರ್ನಾಟಕದಲ್ಲಿ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 29 ತಾಲೂಕುಗಳನ್ನು ಸೇರಿಸಲಾಗಿದೆ. ಸರ್ಕಾರವು ಗ್ರೌಂಡ್ ಟ್ರೂಥಿಂಗ್ (ವಾಸ್ತವ ಪರಿಶೀಲನೆ) ಅಧಿಸೂಚನೆಯನ್ನು ಹೊರಡಿಸಿದೆ. ತಮ್ಮ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಶಾಸಕರು ಒತ್ತಾಯಿಸಿದ್ದರು. ಅದರಲ್ಲೂ ಇಂಡಿ ತಾಲೂಕು ಸೇರ್ಪಡೆಯಾಗದ ಕಾರಣ ಶಾಸಕ ಯಶವಂತರಾಯಗೌಡ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂಡಿ ಹಾಗೂ ಚಡಚಣ ಸೇರಿ ಹಲವು ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿವೆ.

ಬೆಂಗಳೂರು, ಸೆ.24: ಕರ್ನಾಟಕದಲ್ಲಿ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 29 ತಾಲೂಕುಗಳನ್ನು ಸೇರಿಸಲಾಗಿದೆ. ಸರ್ಕಾರವು ಗ್ರೌಂಡ್ ಟ್ರೂಥಿಂಗ್ (ವಾಸ್ತವ ಪರಿಶೀಲನೆ) ಅಧಿಸೂಚನೆಯನ್ನು ಹೊರಡಿಸಿದೆ. ತಮ್ಮ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಶಾಸಕರು ಒತ್ತಾಯಿಸಿದ್ದರು. ಅದರಲ್ಲೂ ಇಂಡಿ ತಾಲೂಕು ಸೇರ್ಪಡೆಯಾಗದ ಕಾರಣ ಶಾಸಕ ಯಶವಂತರಾಯಗೌಡ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂಡಿ ಹಾಗೂ ಚಡಚಣ ಸೇರಿ ಹಲವು ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿವೆ. ಬರಗಾಲದಿಂದ ಕಂಗಾಲಾಗಿರುವ ಕರ್ನಾಟಕದಲ್ಲಿ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 29 ತಾಲೂಕುಗಳನ್ನು ಸೇರಿಸಲಾಗಿದೆ. ರಾಜ್ಯ ಸರ್ಕಾರವು ಈ ಕುರಿತು ಗ್ರೌಂಡ್ ಟ್ರೂಥಿಂಗ್ (ವಾಸ್ತವ ಪರಿಶೀಲನೆ) ಅಧಿಸೂಚನೆಯನ್ನು ಹೊರಡಿಸಿದೆ. ಈ ಹೊಸ ಪಟ್ಟಿಯಲ್ಲಿ ಇಂಡಿ, ಔರಾದ್, ಗೋಕಾಕ್, ರಾಮದುರ್ಗ, ಸೌದತ್ತಿ, ಕಾಗವಾಡ, ಚಡಚಣ, ಕಲಘಟಗಿ, ಕುಂದಗೋಳ ಮತ್ತು ಅಣ್ಣಾವರ ಸೇರಿದಂತೆ ಒಟ್ಟು 29 ತಾಲೂಕುಗಳು ಸೇರಿವೆ. ಹಲವು ಶಾಸಕರು ತಮ್ಮ ಜಿಲ್ಲೆಗಳು ಹಾಗೂ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿದ್ದರು. ಈ ಕುರಿತು ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಕೆಲ ನಾಯಕರು ರಾಜೀನಾಮೆ ನೀಡುವ ಬೆದರಿಕೆಯನ್ನೂ ಹಾಕಿದ್ದರು. ಇಂಡಿ ತಾಲೂಕು ಬರಪೀಡಿತ ಪಟ್ಟಿಯಲ್ಲಿ ಸೇರ್ಪಡೆಯಾಗದ ಕಾರಣ, ಶಾಸಕ ಯಶವಂತರಾಯಗೌಡ ಅವರು ರಾಜೀನಾಮೆ ಸಲ್ಲಿಸಿದ್ದರು. ಈ ರಾಜೀನಾಮೆಯ ಬೆನ್ನಲ್ಲೇ ಇಂಡಿ ಮತ್ತು ಚಡಚಣ ತಾಲೂಕುಗಳು ಸೇರಿದಂತೆ 29 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಂಡಿವೆ. ಈ ಮೂಲಕ ಬರದಿಂದ ತತ್ತರಿಸಿರುವ ರೈತರಿಗೆ ತಾತ್ಕಾಲಿಕವಾಗಿ ಭರವಸೆ ಮೂಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More