ಸರ್ವಪಕ್ಷ ಸಭೆ ಬಳಿಕ ಕಾವೇರಿ ನೀರು ವಿವಾದದ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು?

ಸರ್ವಪಕ್ಷ ಸಭೆ ಬಳಿಕ ಕಾವೇರಿ ನೀರು ವಿವಾದದ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು?

ಕಿರಣ್​ ಹನಿಯಡ್ಕ
| Updated By: ಆಯೇಷಾ ಬಾನು

Updated on: Aug 23, 2023 | 3:12 PM

Cauvery Water Dispute: ರಾಜ್ಯದ ಜಲ ವಿವಾದಗಳ ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ್ದೇನೆ. ಸಮಸ್ಯೆಯನ್ನು ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ನಮ್ಮ ಸಮಸ್ಯೆಯನ್ನು ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಿದ್ದೇವೆ ಎಂದು ಸಿಎಂ ನೇತೃತ್ವದ ಸಭೆ ಬಳಿಕ ಮಂಡ್ಯ ಸಂಸದೆ ಸುಮಲತಾ ಹೇಳಿದರು.

ತಮಿಳುನಾಡಿಗೆ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನೀರು ಹರಿಸುವ ವಿಚಾರದಲ್ಲಿ(Cauvery Water Dispute) ಆಡಳಿತ ಪಕ್ಷ ಕಾಂಗ್ರೆಸ್(Congress) ಮತ್ತು ಪ್ರತಿಪಕ್ಷ ಬಿಜೆಪಿ(BJP) ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ರಾಜ್ಯದ ಹಲವೆಡೆ ಈ ವಿಚಾರಕ್ಕೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಇನ್ನು ಕಾವೇರಿ ವಿಚಾರವಾಗಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಸಂಸದೆ ಸುಮಲತಾ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಜಲ ವಿವಾದಗಳ ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ್ದೇನೆ. ಸಮಸ್ಯೆಯನ್ನು ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ನಮ್ಮ ಸಮಸ್ಯೆಯನ್ನು ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಿದ್ದೇವೆ ಎಂದು ಸಿಎಂ ನೇತೃತ್ವದ ಸಭೆ ಬಳಿಕ ಮಂಡ್ಯ ಸಂಸದೆ ಸುಮಲತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ