ಸಿಎಂ, ಸಚಿವರ ಮನವೊಲಿಕೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 7ನೇ ದಿನಕ್ಕೆ ಕಾಲಿಟ್ಟ ಹೋರಾಟ

Updated on: Nov 23, 2026 | 7:22 AM

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ. ₹15,000 ಗೌರವಧನ ಹಾಗೂ ₹5 ಲಕ್ಷ ನಿವೃತ್ತಿ ಪರಿಹಾರದ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಮೈ ಕೊರೆಯುವ ಚಳಿ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಧರಣಿ ಮುಂದುವರಿಸಿದ್ದಾರೆ.

ಬೆಂಗಳೂರು, ನವೆಂಬರ್ 23: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಮೈ ಕೊರೆಯುವ ಚಳಿ ಮತ್ತು ಗಾಳಿಯನ್ನೂ ಲೆಕ್ಕಿಸದೆ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ. ಮುಖ್ಯಮಂತ್ರಿಗಳ ಮನವೊಲಿಕೆ ಮತ್ತು ಆರೋಗ್ಯ ಸಚಿವರ ಸಂಧಾನ ಪ್ರಯತ್ನಗಳಿಂದ ಕೂಡ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯ ಕಾವನ್ನು ತಗ್ಗಿಲು ಸಾಧ್ಯವಾಗಿಲ್ಲ. ಗೌರವಧನವನ್ನು ₹15,000ಕ್ಕೆ ಹೆಚ್ಚಿಸಬೇಕು ಹಾಗೂ ₹5 ಲಕ್ಷ ನಿವೃತ್ತಿ ಪರಿಹಾರ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಗಳಾಗಿವೆ. ಈ ಕುರಿತು ಅಧಿಕೃತ ಆದೇಶ ಪ್ರತಿ ಕೈ ಸೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ನವೆಂಬರ್ 17ರಂದು ಆರಂಭವಾದ ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಸುಮಾರು 45,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದಾರೆ. ಒಂದು ಸುತ್ತಿನ ಮಾತುಕತೆ ವಿಫಲಗೊಂಡಿದ್ದು, ಸರ್ಕಾರದಿಂದ ಸ್ಪಷ್ಟ ನಿರ್ಧಾರ ಬರುವವರೆಗೂ ಫ್ರೀಡಂ ಪಾರ್ಕ್ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More