ಬೆಂಗಳೂರು: ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ

Edited By:

Updated on: Nov 19, 2026 | 12:30 PM

ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಚಳಿ ನಡುವೆ ಹೋರಾಟ ಮುಂದುವರಿಸಿದ ಇಬ್ಬರು ಕಾರ್ಯಕರ್ತೆಯರು ಅಸ್ವಸ್ಥರಾಗಿ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ₹15,000 ಗೌರವಧನಕ್ಕೆ ಆಗ್ರಹಿಸಿ, ಸಾರ್ವಜನಿಕರ ಬೆಂಬಲಕ್ಕಾಗಿ ಕರಪತ್ರ ಹಂಚುತ್ತಿದ್ದಾರೆ. ಲಿಖಿತ ಭರವಸೆ ಸಿಗುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಬೆಂಗಳೂರು, ನವೆಂಬರ್ 19: ಗೌರವಧನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳ ಈಡೇರಿಕೆಗಾಗಿ ಸಾವಿರಾರು ಆಶಾ ಕಾರ್ಯಕರ್ತೆಯರು ಬೀದಿಗಿಳಿದು ಹೋರಾಟ ಮುಂದುವರಿಸಿದ್ದಾರೆ. ಈ ಪ್ರತಿಭಟನೆಯ ಸಂದರ್ಭದಲ್ಲಿ, ರಾಯಚೂರಿನಿಂದ ಬಂದಿದ್ದ 45 ವರ್ಷದ ಚಾಂದ್ ಬಿ ಮತ್ತು ದಾವಣಗೆರೆಯ 50 ವರ್ಷದ ರಾಧಾ ಎಂಬ ಇಬ್ಬರು ಕಾರ್ಯಕರ್ತೆಯರು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅವರನ್ನು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಳಿ ಮತ್ತು ವಯೋಸಹಜ ಕಾಯಿಲೆಗಳಿಂದಾಗಿ ಅವರು ಬಳಲಿದ್ದಾರೆ ಎಂದು ತಿಳಿದುಬಂದಿದೆ. ಆಶಾ ಕಾರ್ಯಕರ್ತೆಯರು ₹15,000 ಗೌರವಧನ ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದಾರೆ. ಕಳೆದ ಸರ್ಕಾರ ನೀಡಿದ್ದ ಭರವಸೆ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋರಾಟಕ್ಕೆ ಸಾರ್ವಜನಿಕರ ಬೆಂಬಲ ಪಡೆಯಲು ಮೆಜೆಸ್ಟಿಕ್, ರೈಲ್ವೇ ನಿಲ್ದಾಣ, ಕೋರ್ಟ್ ಮತ್ತು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕರಪತ್ರಗಳನ್ನು ಹಂಚುತ್ತಿದ್ದಾರೆ. ಬೇಡಿಕೆಗಳಿಗೆ ಲಿಖಿತ ಭರವಸೆ ಸಿಗುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ದೃಢವಾಗಿ ಹೇಳಿದ್ದಾರೆ. ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸಿದರೂ ಸಫಲವಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More