Karnataka Assembly By-Elections Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು

Edited By:

Updated on: Nov 23, 2024 | 12:53 PM

ಸಂಡೂರು ಕ್ಷೇತ್ರದಲ್ಲಿ ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಸಚಿವ ಶಿವರಾಜ ತಂಗಡಗಿ ಮತದಾರರಿಗೆ ಹಣ ಹಂಚಿದ್ದಾರೆ. ಕಾಂಗ್ರೆಸ್​ ಹಣ ಹಂಚಿದ ಪ್ರದೇಶದಲ್ಲಿ ನಮಗೆ ಹಿನ್ನಡೆ ಆಗಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಆರೋಪ ಮಾಡಿದ್ದಾರೆ.

ಬಳ್ಳಾರಿ, ನವೆಂಬರ್​ 23: ಸಂಡೂರು ಕ್ಷೇತ್ರದಲ್ಲಿ ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಸಚಿವ ಶಿವರಾಜ ತಂಗಡಗಿ ಮತದಾರರಿಗೆ ಹಣ ಹಂಚಿದ್ದಾರೆ. ಕಾಂಗ್ರೆಸ್​ ಹಣ ಹಂಚಿದ ಪ್ರದೇಶದಲ್ಲಿ ನಮಗೆ ಹಿನ್ನಡೆ ಆಗಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಆರೋಪ ಮಾಡಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋಲಿನ‌‌‌ ಹೊಣೆ ನಾನೇ ಹೊರುವೆ. ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವೆ. ಇದು ಧರ್ಮ, ಅಧರ್ಮ ಚುನಾವಣೆಯಾಗಿದೆ. ಈ ಸೋಲು ನಾನು ಸವಾಲಾಗಿ ಸ್ವೀಕರಿಸುವೆ. ಮುಂದಿನ ದಿನ ನಂಗೆ ಅಥವಾ ದಿವಾಕರ್ ಯಾರಿಗೆ ಟಿಕೇಟ್ ನೀಡಲಿ, 2028ರಲ್ಲಿ ಬಿಜೆಪಿ ಗೆಲವು ನಿಶ್ಚಿತ ಎಂದರು.