AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ, ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ: ಡಿಕೆ ಶಿವಕುಮಾರ್​

ಗ್ಯಾರಂಟಿ, ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ: ಡಿಕೆ ಶಿವಕುಮಾರ್​

ವಿವೇಕ ಬಿರಾದಾರ
|

Updated on: Nov 23, 2024 | 1:27 PM

Share

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದರು.

ಬೆಂಗಳೂರು, ನವೆಂಬರ್​ 23: ಉಪ ಚುನಾವಣೆ ಫಲಿತಾಂಶ (Karnataka By Poll Result) 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ‌ ಹೇಳಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್​ಡಿ ಕುಮಾರಸ್ವಾಮಿ ಅವರು ಹೆಚ್​ಡಿಕೆ ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ. ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಕುರುಹುಗಳಿಗೆ ಜನ ಉತ್ತರ ನೀಡಿದ್ದಾರೆ. ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲೂ ನಾವು ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಶಿಗ್ಗಾಂವಿಯಲ್ಲಿ ಭರತ್ ಸೋಲು ಅನ್ನೋದು ಹೇಳಲ್ಲ. ಅಲ್ಲಿ ಈ ಹಿಂದೆ ನಮ್ಮ ಅಭ್ಯರ್ಥಿ ಸೋತಿದ್ದರು. ಈಗ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಂಡೂರಲ್ಲಿನಲ್ಲೂ ನಾವು ಗೆದ್ದಿದ್ದೇವೆ. ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು; ಮುಗ್ಗರಿಸಿದ ಭರತ್

ಅನೇಕ ಬಾರಿ ಬಿಜೆಪಿ ಜೆಡಿಎಸ್ ನಾಯಕರು ಟೀಕೆ ಮಾಡಿದ್ದಾರೆ. ನಾನು ಮೊದಲೇ ಹೇಳಿದ್ದೆ, ಟೀಕೆ ಸಾಯುತ್ತವೆ, ಕೆಲಸ ಉಳಿಯಿತ್ತವೆ ಅಂತ. ಈಗ ಜನರ ಮನ್ನಣೆ ಕೊಟ್ಟಿದ್ದಾರೆ. ಜನರು ಭಾವನೆ ಮೇಲೆ ರಾಜಕಾರಣ ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು. ಅದೇ ಜನ ಆಶೀರ್ವಾದ ನೀಡಿದ್ದಾರೆ ಎಂದರು.

ಗ್ಯಾರಂಟಿ ಕುರಿತು ಅಪಪ್ರಚಾರ, ಗ್ಯಾರಂಟಿ, ಅಭಿವೃದ್ಧಿಗೆ ಹಣ ಇಲ್ಲ ಎನ್ನುತ್ತಿದ್ದರು. ಆದರೆ, ಈಗ ಒಂದೇ ಕ್ಷೇತ್ರಕ್ಕೆ ಕೋಟಿ ಕೋಟಿ ಹಣ ಹೋಗುತ್ತಿದೆ. ತಾಯಂದಿರು ಉಚಿತ ಪ್ರವಾಸ ಮಾಡುತ್ತಿದ್ದಾರೆ, ಹಣ ಬರುತ್ತಿದೆ. ಸುಳ್ಳು ಆರೋಪ ಮಾಡಿದ್ದಾರೆ, ಸುಳ್ಳೇ ‌ಮನೆ ದೇವರು ಎಂದು ಪ್ರಚಾರ ಮಾಡಿದ್ದಾರೆ. ಅದಕ್ಕೆ ‌ಮತದಾರರೇ ಉತ್ತರ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ