Karnataka Assembly Election 2023: ಜೆಡಿಎಸ್ಗೆ ಮತ ಹಾಕುವುದು ವೇಸ್ಟ್ ಎಂದ ಡಿಕೆ ಸುರೇಶ್
ವಿಧಾನಸಭಾ ಚುನಾವಣೆ ರಂಗೇರಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಎಸ್ ಗಂಗಾಧರ್ ಪರ,ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪ್ರಚಾರ ಕೈಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ದ ಹರಿಹಾಯ್ದಿದ್ದಾರೆ.
ರಾಮನಗರ: ವಿಧಾನಸಭಾ ಚುನಾವಣೆ(Karnataka Assembly Election) ರಂಗೇರಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಚನ್ನಪಟ್ಟಣ(Channapatna)ದ ಕಾಂಗ್ರೆಸ್ ಅಭ್ಯರ್ಥಿ ಎಸ್ ಗಂಗಾಧರ್ ಪರ,ಕಾಂಗ್ರೆಸ್ ಸಂಸದ ಡಿಕೆ ಸುರೇಶ್(D. K. Suresh) ಪ್ರಚಾರ ಕೈಗೊಂಡಿದ್ದು, ಚನ್ನಪಟ್ಟಣದ ವಿವಿಧ ಗ್ರಾಮಗಳಲ್ಲಿ ಮತಶಿಕಾರಿಗೆ ಇಳಿದಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಸುರೇಶ್ ‘ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ದ ಹರಿಹಾಯ್ದಿದ್ದಾರೆ ‘ಅವರ ಪಕ್ಷ ಅಧಿಕಾರಕ್ಕೆ ಬರಲ್ಲ, ಜೆಡಿಎಸ್ಗೆ ಮತಹಾಕಿ ಪ್ರಯೋಜನವಿಲ್ಲ. ರಾಜ್ಯಾದ್ಯಂತ ಕಾಂಗ್ರೆಸ್ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಈ ಬಾರಿ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos