Karnataka Assembly Election 2023: ಜೆಡಿಎಸ್​ಗೆ ಮತ ಹಾಕುವುದು ವೇಸ್ಟ್​ ಎಂದ ಡಿಕೆ ಸುರೇಶ್

|

Updated on: Apr 29, 2023 | 2:42 PM

ವಿಧಾನಸಭಾ ಚುನಾವಣೆ ರಂಗೇರಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಎಸ್ ಗಂಗಾಧರ್ ಪರ,ಕಾಂಗ್ರೆಸ್ ಸಂಸದ ಡಿಕೆ ಸುರೇಶ್​ ಪ್ರಚಾರ ಕೈಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ಹರಿಹಾಯ್ದಿದ್ದಾರೆ.

ರಾಮನಗರ: ವಿಧಾನಸಭಾ ಚುನಾವಣೆ(Karnataka Assembly Election) ರಂಗೇರಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಚನ್ನಪಟ್ಟಣ(Channapatna)ದ ಕಾಂಗ್ರೆಸ್ ಅಭ್ಯರ್ಥಿ ಎಸ್ ಗಂಗಾಧರ್ ಪರ,ಕಾಂಗ್ರೆಸ್ ಸಂಸದ ಡಿಕೆ ಸುರೇಶ್​(D. K. Suresh) ಪ್ರಚಾರ ಕೈಗೊಂಡಿದ್ದು, ಚನ್ನಪಟ್ಟಣದ ವಿವಿಧ ಗ್ರಾಮಗಳಲ್ಲಿ ಮತಶಿಕಾರಿಗೆ ಇಳಿದಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಸುರೇಶ್​ ‘ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ಹರಿಹಾಯ್ದಿದ್ದಾರೆ ‘ಅವರ ಪಕ್ಷ ಅಧಿಕಾರಕ್ಕೆ ಬರಲ್ಲ, ಜೆಡಿಎಸ್​ಗೆ ಮತಹಾಕಿ ಪ್ರಯೋಜನವಿಲ್ಲ. ರಾಜ್ಯಾದ್ಯಂತ ಕಾಂಗ್ರೆಸ್​ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಈ ಬಾರಿ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ