ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಬೆಳಗಾವಿಯಲ್ಲಿ ಹೈ ಅಲರ್ಟ್ ಆದ ಪೊಲೀಸರು
ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಗಡಿನಾಡು ಬೆಳಗಾವಿಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನ ನಾಯಕರು ಮತದಾರರಿಗೆ ಆಮಿಷಗಳನ್ನು ಒಡ್ಡುತ್ತಿರವ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 60 ಚೆಕ್ಪೋಸ್ಟ್ ತೆರೆದು ತಪಾಸಣೆ ಮಾಡುತ್ತಿದ್ದಾರೆ.
ಬೆಳಗಾವಿ: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಗಡಿನಾಡು ಬೆಳಗಾವಿಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನ ನಾಯಕರು ಮತದಾರರಿಗೆ ಆಮಿಷಗಳನ್ನು ಒಡ್ಡುತ್ತಿರವ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 60 ಚೆಕ್ಪೋಸ್ಟ್ ತೆರೆದು ತಪಾಸಣೆ ಮಾಡುತ್ತಿದ್ದಾರೆ. 25 ಅಂತರ್ ರಾಜ್ಯ ಚೆಕ್ಪೋಸ್ಟ್ ನಿರ್ಮಿಸಿ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದು, ಕಳೆದ ಎರಡು ದಿನಗಳಲ್ಲಿ ಸೀರೆ, ನಗದು ಇನ್ನಿತರ ವಸ್ತುಗಳ ಜಪ್ತಿ ಮಾಡಿದ್ದಾರೆ. ದಿನದ 24 ಗಂಟೆಯೂ 3 ಶಿಫ್ಟ್ಗಳಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
