ಮಹಿಳಾ ಮತದಾರರಿಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 140 ಪಿಂಕ್ ಬೂತ್ ನಿರ್ಮಾಣ
ಬೆಂಗಳೂರಲ್ಲಿ ಮಹಿಳಾ ಮತದಾರರ ಸೆಳೆಯಲು ಪಿಂಕ್ ಬೂತ್ ರೆಡಿ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 140 ಪಿಂಕ್ ಬೂತ್ ನಿರ್ಮಾಣ ಮಾಡಲಾಗಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಪಿಂಕ್ ಬೂತ್ ವ್ಯವಸ್ಥೆ ಮಾಡಲಾಗಿದೆ.
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದ್ದು, ರಾಜ್ಯಾದ್ಯಂತ ಮತದಾನಕ್ಕೆ ಬೂತ್ಗಳನ್ನ ಸಜ್ಜುಗೊಳಿಸಲಾಗ್ತಿದೆ. ಬೆಂಗಳೂರು, ಕೋಲಾರ, ಮೈಸೂರು, ಹಾಸನ ಬೆಳಗಾವಿ, ಕೊಪ್ಪಳ ಸೇರಿದಂತೆ ರಾಜ್ಯಾದ್ಯಂತ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದೆ. ಗಡಿಗಳಲ್ಲಿ ಚುನಾವಣಾ ಅಕ್ರಮ ತಡೆಯಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಚೆಕ್ ಪೋಸ್ಟ್ಗಳಲ್ಲಿ ಪೊಲೀಸರು ಹಾಗೂ ಚುನಾವಣಾ ಸಿಬ್ಬಂದಿ ತಪಾಸಣೆಯಲ್ಲಿ ತೊಡಗಿದ್ದಾರೆ.
ಬೆಂಗಳೂರಲ್ಲಿ ಮಹಿಳಾ ಮತದಾರರ ಸೆಳೆಯಲು ಪಿಂಕ್ ಬೂತ್ ರೆಡಿ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 140 ಪಿಂಕ್ ಬೂತ್ ನಿರ್ಮಾಣ ಮಾಡಲಾಗಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಪಿಂಕ್ ಬೂತ್ ವ್ಯವಸ್ಥೆ ಮಾಡಲಾಗಿದೆ. ಮಹಿಳಾ ಮತದಾರರು ಹೆಚ್ಚಿರುವ ವಾರ್ಡ್ಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
Published on: May 09, 2023 11:07 AM
Latest Videos