Karnataka Assembly Elections 2023: ಕೋಲಾರದ ರಾಮಸಂದ್ರ ಚೆಕ್ಪೋಸ್ಟ್ನಲ್ಲಿ 1.81 ಕೋಟಿ ಹಣ ಜಪ್ತಿ
ಚೆಕ್ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಹಣ ಪತ್ತೆಯಾಗಿದೆ. ಸದ್ಯ ಹಣ ಹಾಗೂ ಎಟಿಎಂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲಾರದ ರಾಮಸಂದ್ರ ಚೆಕ್ಪೋಸ್ಟ್ನಲ್ಲಿ 1.81 ಕೋಟಿ ಹಣ ಜಪ್ತಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಮಧ್ಯರಾತ್ರಿ ಎಟಿಎಂ ವಾಹನದಲ್ಲಿ ಹಣ ಸಾಗಾಟ ಮಾಡಲಾಗುತ್ತಿತ್ತು. ಚೆಕ್ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಹಣ ಪತ್ತೆಯಾಗಿದೆ. ಸದ್ಯ ಹಣ ಹಾಗೂ ಎಟಿಎಂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Published on: Apr 16, 2023 10:40 AM