ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದಲೇ ಹೆಚ್​ಡಿ ಕುಮಾರಸ್ವಾಮಿ ಚುನಾವಣಾ ರಣತಂತ್ರ

Updated on: Apr 23, 2023 | 5:09 PM

ಮುಖ್ಯಾಂಶಗಳು

  • ಅನಾರೋಗ್ಯದ ನಡುವೆಯೂ ಹೆಚ್​ಡಿಕೆಯಿಂದ ಚುನಾವಣಾ ರಣತಂತ್ರ
  • ಆಸ್ಪತ್ರೆಯ ಬೆಡ್​ ಮೇಲೆ ಕುಳಿತೇ ಪಕ್ಷದ ಗೆಲುವಿಗೆ ಹೆಚ್​ಡಿ ಕುಮಾರಸ್ವಾಮಿ ರಣತಂತ್ರ
  • ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಪಣತೊಟ್ಟಿರುವ ಕುಮಾರಸ್ವಾಮಿ, ಆಸ್ಪತ್ರೆಯಿಂದಲೂ ರಾಜಕೀಯ ತಂತ್ರಗಳನ್ನು ರೂಪಿಸುತ್ತಿದ್ದಾರೆ.

ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಹೆಚ್​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚುನಾವಣೆ ಹಿನ್ನೆಲೆ ಇತ್ತೀಚೆಗೆ ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದಾರೆ. ನಿರಂತರ ಕಾರ್ಯಕ್ರಮಗಳ ಒತ್ತಡದಿಂದ ಅವರಿಗೆ ಜ್ವರ ಬಂದಿದೆ. ಹೀಗಾಗಿ, ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದು (ಭಾನುವಾರದಿಂದ) ನಡೆಯಬೇಕಿದ್ದ ಪ್ರಚಾರ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಪಣತೊಟ್ಟಿರುವ ಕುಮಾರಸ್ವಾಮಿ, ಆಸ್ಪತ್ರೆಯಿಂದಲೂ ರಾಜಕೀಯ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ವಲಸೆ ಬಂದಿರುವ ಪ್ರಮುಖ ನಾಯಕರುಗಳು ಕ್ಷೇತ್ರ ಸೇರಿದಂತೆ ಗೆಲ್ಲುವ ಅಭ್ಯರ್ಥಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಅಲ್ಲದೇ ಆ ಕ್ಷೇತ್ರಗಳಿಗೆ ಹೆಚ್ಚು ಪ್ರಚಾರಕ್ಕೆ ತೆರಳಲು ಆಸ್ಪತ್ರೆಯಿಂದಲೇ ರೂಟ್ ಮ್ಯಾಪ್ ಸಿದ್ಧಪಡಿಸಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More