Karnataka Assembly Session 2026 Live: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ; ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಆಯ್ಕೆ
ಕರ್ನಾಟಕ ವಿಧಾನಸಭೆ ಅಧಿವೇಶನ 2026 ನೇರಪ್ರಸಾರ: ಕರ್ನಾಟಕ ವಿಧಾನಸಭೆಯಲ್ಲಿ ಹೊಸ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿತು. ವಿರೋಧ ಪಕ್ಷ ಬಿಜೆಪಿ ಕಲಾಪವನ್ನು ಸಂಪೂರ್ಣವಾಗಿ ಬಹಿಷ್ಕರಿಸಿತು. ಮುಖ್ಯಮಂತ್ರಿಗಳು ರೋಣ ಶಾಸಕ ಜಿ.ಎಸ್. ಪಾಟೀಲ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಅಧಿಕೃತವಾಗಿ ಸೂಚಿಸಿದ್ದು, ಉಪಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ. ಬಿಜೆಪಿ ಬಹಿಷ್ಕಾರವು ಸದನದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರು, ಆ.14: ಕರ್ನಾಟಕ ವಿಧಾನಸಭೆಯ ಕಲಾಪ ಶುಕ್ರವಾರ ಬೆಳಿಗ್ಗೆ ಆರಂಭಗೊಂಡಿದ್ದು, ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಸ್ಪೀಕರ್ ಚುನಾವಣಾ ಪ್ರಕ್ರಿಯೆ ಹಿನ್ನೆಲೆಯಲ್ಲಿ ಪ್ರತಿಪಕ್ಷವಾದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಲಾಪದಿಂದ ಹೊರಗುಳಿದು, ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಿದೆ. ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರ ಹೆಸರನ್ನು ಮುಖ್ಯಮಂತ್ರಿ ಅವರು ಅಧಿಕೃತವಾಗಿ ಸೂಚಿಸಿದರು. ಮುಖ್ಯಮಂತ್ರಿಗಳ ಈ ಪ್ರಸ್ತಾಪಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಅನುಮೋದನೆ ನೀಡಿದ್ದಾರೆ. ಸ್ಪೀಕರ್ ಚುನಾವಣೆಯ ಕಲಾಪ ನಡೆಯುತ್ತಿರುವ ಸಂದರ್ಭದಲ್ಲೇ ವಿಪಕ್ಷ ಬಿಜೆಪಿ ನಾಯಕರು ಕಲಾಪವನ್ನು ಬಹಿಷ್ಕರಿಸಿ ಹೊರನಡೆದಿರುವುದು ಸದನದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

