ಬೆಳಗಾವಿ ಅಧಿವೇಶನ; ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಜಂಟಿ ದಾಳಿಗೆ ನಾವು ಸಿದ್ಧರಿದ್ದೇವೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಬೆಳಗಾವಿ ಅಧಿವೇಶನ; ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಜಂಟಿ ದಾಳಿಗೆ ನಾವು ಸಿದ್ಧರಿದ್ದೇವೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 04, 2023 | 12:45 PM

Karnataka Assembly Winter Session 2023: ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಜಂಟಿಯಾಗಿ ಸರ್ಕಾರದ ಮೇಲೆ ದಾಳಿ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೆಯೇಂದ್ರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಜಂಟಿಯಾಗಿಯಾದರೂ ದಾಳಿ ನಡೆಸಲಿ ಅಥವಾ ಬೇರೆಯವರನ್ನೂ ಜೊತೆಗೂಡಿಸಿಕೊಂಡು ದಾಳಿ ನಡೆಸಲಿ, ತಮ್ಮ ಸರ್ಕಾರ ಎದುರಿಸಲು ಸಿದ್ಧವಿದೆ ಎಂದು ಹೇಳಿದರು.

ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕಾಗಿ (Karnataka Assembly Winter Session 2023) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ನಗರಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದ (Sambra Airport) ಹೊರಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು. ಗ್ಯಾರಂಟಿ ಗಳನ್ನು ಘೋಷಿಸಿದಕ್ಕಾಗೇ ಕಾಂಗ್ರೆಸ್ ತೆಲಂಗಾಣದಲ್ಲಿ ಗೆಲ್ಲುವುದು ಸಾಧ್ಯವಾಯಿತು ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ತಮ್ಮ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಚುನಾವಣೆ ಗೆದ್ದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದ್ದು ಚುನಾವಣೆಯಲ್ಲಿ ಗೆಲ್ಲುವುದಕ್ಕಲ್ಲ, ಅವು ಎಲ್ಲಾ ವರ್ಗಗಳ ಬಡವರಿಗೆ ನೆರವಾಗಲು ರೂಪಿಸಿರುವ ಕಾರ್ಯಕ್ರಮಗಳು ಎಂದು ಹೇಳಿದ ಸಿದ್ದರಾಮಯ್ಯ, ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು 6 ತಿಂಗಳು ಸಮಯ ತೆಗೆದುಕೊಂಡ ಬಿಜೆಪಿಗೆ ತಮ್ಮ ಸರ್ಕಾರಕ್ಕೆ ಸಲಹೆ ನೀಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ